Download Our App

Follow us

Home » ಅಪರಾಧ » ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ಪ್ರಜೆ ಅರೆಸ್ಟ್..!

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ಪ್ರಜೆ ಅರೆಸ್ಟ್..!

ಬೆಂಗಳೂರು : ಪಾಕಿಸ್ತಾನಿ ಪ್ರಜೆಯು ಬಾಂಗ್ಲಾದೇಶಿ ಪ್ರಜೆಯಾದ ತನ್ನ ಹೆಂಡ್ತಿ ಮಕ್ಕಳೊಂದಿಗೆ ಜಿಗಣಿಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಎಂದು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸ್ಥಳೀಯ ಪೊಲೀಸರು ನಿನ್ನೆ ರಾತ್ರಿ ಅವರ ನಿವಾಸದ ಮೇಲೆ ದಾಳಿ ನಡೆಸಿ ಬಂಧಿಸಿದ್ದಾರೆ.

ಧಾರ್ಮಿಕ ವಿಷಯಗಳ ವಿವಾದದ ಕಾರಣ ಪಾಕಿಸ್ತಾನದ ಪ್ರಜೆ ತನ್ನ ದೇಶವನ್ನು ತೊರೆದು ಬಾಂಗ್ಲಾದೇಶಕ್ಕೆ ಹೋಗಿದ್ದನು. ಬಳಿಕ ಬಾಂಗ್ಲಾದ ಢಾಕಾದಲ್ಲಿ ಮಹಿಳೆಯನ್ನು ವಿವಾಹವಾಗಿದ್ದು, ಆತ 2014ರಲ್ಲಿ ಆಕೆಯೊಂದಿಗೆ ಭಾರತಕ್ಕೆ ಬಂದಿದ್ದ ಎನ್ನಲಾಗಿದೆ.

ಆರಂಭದಲ್ಲಿ ದೆಹಲಿಯಲ್ಲಿ ನೆಲೆಸಿ ಅಲ್ಲಿ ಆಧಾರ್ ಕಾರ್ಡ್, ವೋಟರ್ ಐಡಿ ಮತ್ತು ಡ್ರೈವಿಂಗ್ ಲೈಸೆನ್ಸ್‌ ಪಡೆದುಕೊಂಡಿದ್ದಾನೆ. ಬಳಿಕ 2016ರಲ್ಲಿ ಕುಟುಂಬ ಸಮೇತ ಬೆಂಗಳೂರಿಗೆ ಬಂದಿದ್ದಾನೆ. ಬೆಂಗಳೂರು ನಗರದ ಹೊರವಲಯದ ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಪ್ರಜೆ ಮತ್ತು ಇತರ ಮೂವರು ವಿದೇಶಿಗರನ್ನು ಪೊಲೀಸರು ಬಂಧಿಸಿದ್ದಾರೆ. ಪಾಕಿಸ್ತಾನಿ ಪ್ರಜೆ, ಬಾಂಗ್ಲಾದೇಶಿ ಪ್ರಜೆ ಮತ್ತು ಇಬ್ಬರು ಮಕ್ಕಳನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ : ಮೈಸೂರು : ದೇವರ ಉತ್ಸವದಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗಲೇ ಸಂಭವಿಸಿದ ಹೃದಯಾಘಾತ – ವ್ಯಕ್ತಿ ಸಾವು..!

Leave a Comment

DG Ad

RELATED LATEST NEWS

Top Headlines

4 ಅಂತಸ್ತಿನ ಕಟ್ಟಡ ಕುಸಿತ – ಕೂದಲೆಳೆ ಅಂತರದಲ್ಲಿ ಪಾರಾದ ತಾಯಿ, ಮಗು..!

ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ತಾಯಿ ಮಗು ಪ್ರಾಣಾಪಾಯದಿಂದ ಪಾರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಆಘಾತಕಾರಿ ಘಟನೆಯ ಸಂಪೂರ್ಣ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೀಡಿಯೊದಲ್ಲಿ

Live Cricket

Add Your Heading Text Here