Download Our App

Follow us

Home » ಕ್ರೀಡೆ » ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ : ಪುರುಷರ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ನವದೀಪ್ ಸಿಂಗ್..!

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ : ಪುರುಷರ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ನವದೀಪ್ ಸಿಂಗ್..!

ಪ್ಯಾರಿಸ್ : ಪ್ಯಾರಾಲಿಂಪಿಕ್ಸ್​ನಲ್ಲಿ ಶನಿವಾರ ನಡೆದ ಪುರುಷರ ಜಾವೆಲಿನ್ ಥ್ರೋ ಎಫ್​41 ಸ್ಪರ್ಧೆಯಲ್ಲಿ ಭಾರತದ ಜಾವೆಲಿನ್ ಎಸೆತಗಾರ ನವದೀಪ್ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ. 47.32 ಮೀಟರ್‌ ದೂರಕ್ಕೆ ಜಾವೆಲಿನ್​ ಎಸೆಯುವ ಮೂಲಕ ನವದೀಪ್ ಪ್ಯಾರಾಲಿಂಪಿಕ್ಸ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ಟೋಕಿಯೊ 2021 ಪ್ಯಾರಾಲಿಂಪಿಕ್ಸ್​ನಲ್ಲಿ ಚೀನಾದ ಪೆಂಗ್‌ಕ್ಸಿಯಾಂಗ್ ಸನ್ 47.13m ದೂರಕ್ಕೆ ಜಾವೆಲಿನ್ ಎಸೆದಿದ್ದು ಈವರೆಗಿನ ದಾಖಲೆಯಾಗಿತ್ತು. ಇದೀಗ ನವದೀಪ್ ಸಿಂಗ್ 47.32 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ವಿಶೇಷ ಎಂದರೆ ಈ ಸ್ಪರ್ಧೆಯಲ್ಲಿ ಆರಂಭದಲ್ಲಿ ನವದೀಪ್ ಬೆಳ್ಳಿ ಪದಕವನ್ನು ಗೆದ್ದಿದ್ದರು. ಆದರೆ ಇರಾನ್‌ನ ಬೀಟ್ ಸಡೆಗ್ ಅವರು ಕ್ರೀಡಾಹೀನ ನಡವಳಿಕೆಗಾಗಿ ಅನರ್ಹಗೊಂಡ ನಂತರ ನವದೀಪ್ ಅವರನ್ನು ಚಿನ್ನ ಪದಕಕ್ಕೆ ಅಪ್‌ಗ್ರೇಡ್ ಮಾಡಲಾಯಿತು. ಈ ಮೂಲಕ ನವದೀಪ್ ಸಿಂಗ್​ ಭಾರತಕ್ಕೆ 7ನೇ ಚಿನ್ನದ ಪದಕ ತಂದುಕೊಟ್ಟರು.

ಸಿಮ್ರಾನ್​ಗೆ ಕಂಚಿನ ಪದಕ : ಮಹಿಳೆಯರ 200 ಮೀ ಟಿ12 ಓಟದ ಸ್ಪರ್ಧೆಯಲ್ಲಿ ಭಾರತದ ಸಿಮ್ರಾನ್ ಶರ್ಮಾ ಕಂಚಿನ ಪದಕ ಗೆದ್ದಿದ್ದಾರೆ. ಇದರೊಂದಿಗೆ ಭಾರತದ ಪದಕಗಳ ಸಂಖ್ಯೆ 29ಕ್ಕೆ ಏರಿದೆ. 

ಇದನ್ನೂ ಓದಿ : ಬೆಂಗಳೂರು : ಕುಡಿದ ಮತ್ತಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಹೊಡೆದಾಟ – ವಿಡಿಯೋ ವೈರಲ್​..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here