Download Our App

Follow us

Home » ಜಿಲ್ಲೆ » ಪರಶುರಾಮ ಥೀಮ್ ಪಾರ್ಕ್ ಹಗರಣ – ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಸ್ಪೆಂಡ್..!

ಪರಶುರಾಮ ಥೀಮ್ ಪಾರ್ಕ್ ಹಗರಣ – ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಸ್ಪೆಂಡ್..!

ಉಡುಪಿ : ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ ಪ್ರಕರಣದಲ್ಲಿ ಮೊದಲ ತಲೆದಂಡವಾಗಿದೆ. ನಕಲಿ ಪರಶುರಾಮನ ಮೂರ್ತಿ ಸ್ಥಾಪನೆ ಆರೋಪದ ತನಿಖೆ ಹಿನ್ನೆಲೆಯಲ್ಲಿ ಉಡುಪಿ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಅರುಣ್ ಕುಮಾರ್​​ನ್ನು ಅಮಾನತು ಮಾಡಲಾಗಿದೆ.

ಕಾರ್ಕಳದ ಉಮ್ಮಿಕಲ್ ಬೆಟ್ಟದಲ್ಲಿ ನಿರ್ಮಿಸಲಾಗಿದ್ದ ಪರಶುರಾಮ್ ಥೀಮ್ ಪಾರ್ಕ್​ನಲ್ಲಿ ನಕಲಿ ಪ್ರತಿಮೆಯನ್ನು ನಿರ್ಮಿಸಿದ್ದ ಆರೋಪ ಕೇಳಿ ಬಂದಿತ್ತು. ನಿರ್ಮಾಣದ ಗುಣಮಟ್ಟದ ಜೊತೆಗೆ ಧಾರ್ಮಿಕ ಭಾವನೆಗೆ ಅಪಚಾರ ಪ್ರಕರಣದ ಬಗ್ಗೆ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿ ಸಿಐಡಿ ತನಿಖೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಅಡ್ಡಿ ಉಂಟು ಮಾಡುವ ಮತ್ತು ಹಸ್ತಕ್ಷೇಪ ಮಾಡುವ ಸಾಧ್ಯತೆ ಹಿನ್ನಲೆಯಲ್ಲಿ ಅರುಣ್ ಕುಮಾರ್​​ನ್ನು ಅಮಾನತು ಮಾಡಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.

ಕಳೆದ ಬಿಜೆಪಿ ಸರಕಾರದ ಅಧಿಕಾರದ ಸಮಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿದ್ದ ಕಾರ್ಕಳ ಶಾಸಕ‌ ಸುನೀಲ್ ಕುಮಾರ್ ಅವರ ನೇತೃತ್ವದಲ್ಲಿ ಉಮ್ಮಿಕಲ್ ಬೆಟ್ಟದ ಮೇಲೆ ಪರಶುರಾಮನ ಥೀಂ ಪಾರ್ಕ್ ನಿರ್ಮಿಸಲಾಗಿತ್ತು. ಚುನಾವಣಾ ಪೂರ್ವದಲ್ಲಿ ಅಂದಿನ ಮುಖ್ಯ ಮಂತ್ರಿ ಬಸವರಾಜ‌ ಬೊಮ್ಮಾಯಿ ಅವರು ಈ ನೂತನ ಥೀಂ ಪಾರ್ಕ್ ಮತ್ತು ಪರಶುರಾಮನ‌ ಭವ್ಯ ಮೂರ್ತಿಯನ್ನು ಲೋಕಾರ್ಪಣೆ ಮಾಡಿದ್ದರು. ಬಳಿಕ ದಿನಗಳಲ್ಲಿ ಕಾಮಗಾರಿ ಬಾಕಿ ಇದೆ ಎನ್ನುವ ಕಾರಣಕ್ಕೆ ಥೀಂ ಪಾರ್ಕ್‌ಗೆ ಪ್ರವಾಸಿಗರ ನಿಷೇಧ ಹೇರಲಾಗಿತ್ತು.

ಇದು ಜನರಿಗೆ ಅನುಮಾನ ಬರುವಂತೆ ಮಾಡಿತ್ತು. ಈ ಪರಿಣಾಮ ತನಿಖೆ ನಡೆಸಿದಾಗ ಮೂರ್ತಿ ಅಸಲಿಯತ್ತು ಹೊರಬಿದ್ದಿತ್ತು. ಹಿತ್ತಾಳೆ ಮೂರ್ತಿಯ ಬದಲು ಫೈಬರ್ ಮೂರ್ತಿ ಸ್ಥಾಪನೆ ಮಾಡಲಾಗಿದೆ ಎಂದು ಆರೋಪ ಕೇಳಿ ಬಂದಿತ್ತು. ಇದಾದ ನಂತರ ಕಾರ್ಕಳದ ಪರಶುರಾಮ ಥೀಂ ಪಾರ್ಕ್‌ನಲ್ಲಿದ್ದ ಪರಶುರಾಮನ ಮೂರ್ತಿ ಏಕಾಏಕಿ ಕಾಣೆಯಾಗಿತ್ತು. ಈ ಕುರಿತು ಸ್ಥಳೀಯರು ಹಾಗೂ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿ ತೀವ್ರ ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ : ಭೀಕರ ಮಳೆಗೆ ತತ್ತರಿಸಿದ ಮಹಾರಾಷ್ಟ್ರ – ಮುಂಬೈನಲ್ಲಿ ರೆಡ್ ಅಲರ್ಟ್‌..!

Leave a Comment

DG Ad

RELATED LATEST NEWS

Top Headlines

ವಿಕ್ಕಿ ಯಾವಾಗಲೂ ಹೇಗಿರ್ತಾರೆ ಗೊತ್ತಾ? – ದಾಂಪತ್ಯದ ಸೀಕ್ರೆಟ್ ರಿವೀಲ್ ಮಾಡಿದ ಕತ್ರಿನಾ ಕೈಫ್..!

ಮುಂಬೈ : ಬಾಲಿವುಡ್​ನ​ ಕ್ಯೂಟ್​ ಕಪಲ್​ಗಳಲ್ಲಿ ಕತ್ರಿನಾ ಕೈಫ್​​ ಮತ್ತು ವಿಕ್ಕಿ ಕೌಶಲ್​ ಕೂಡ ಒಬ್ಬರು. 2021ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಮುದ್ದಾದ ಜೋಡಿಯನ್ನು ಬಿಗ್

Live Cricket

Add Your Heading Text Here