Download Our App

Follow us

Home » ಜಿಲ್ಲೆ » ಮಗಳ ಸಾವಿನ ನೋವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು – 6 ಮಕ್ಕಳ ಬದುಕಿಗೆ ಬೆಳಕಾದ ಬಾಲಕಿ..!

ಮಗಳ ಸಾವಿನ ನೋವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು – 6 ಮಕ್ಕಳ ಬದುಕಿಗೆ ಬೆಳಕಾದ ಬಾಲಕಿ..!

ತುಮಕೂರು : ಮಗಳ ಸಾವಿನ ನೋವಿನಲ್ಲೂ ಪೋಷಕರು ಸಾರ್ಥಕತೆ ಮೆರೆದಿದ್ದು, ಮಗಳ ಅಂಗಾಂಗ ದಾನ ಮಾಡಿ ಮಾದರಿ ಆಗಿದ್ದಾರೆ. ತಿಪಟೂರು ನಗರದ ಹಳೇಪಾಳ್ಯದ ನಿವಾಸಿ 12 ವರ್ಷದ ಚಂದನಗೆ ರಸ್ತೆ ದಾಟುವಾಗ ಲಾರಿ ಡಿಕ್ಕಿ ಹೊಡೆದಿತ್ತು. ಶ್ರೀ ವಿವೇಕಾನಂದ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಓದುತ್ತಿದ್ದ ಚಂದನ ಜು.23ರಂದು ಸ್ಕೂಲ್ ಮುಗಿಸಿ ವಾಪಸ್ ಬರುವಾಗ ತಿಪಟೂರಿನಲ್ಲಿ ಅಪಘಾತ ಸಂಭವಿಸಿತ್ತು.

ಅಪಘಾತದಲ್ಲಿ ಚಂದನ ತೆಲೆಗೆ ಪೆಟ್ಟಾಗಿ ಮೆದುಳು ನಿಷ್ಕ್ರಿಯಗೊಂಡಿತ್ತು. ಅಪಘಾತದ ಬಳಿಕ ಹಾಸನ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಚಂದನ ಸಾವನ್ನಪ್ಪಿದ್ದಾರೆ.

ಹೀಗಾಗಿ ಮಗಳ ಸಾವಿನ ನೋವಿನಲ್ಲೂ ಚಂದನಳ ಅಗಾಂಗ ದಾನ ಮಾಡಲು ಪೋಷಕರು ಒಪ್ಪಿದ್ದು, ಮತ್ತೊಬ್ಬರಿಗೆ ಮಾದರಿ ಆಗಿದ್ದಾರೆ. ಪೋಷಕರ ನಿರ್ಧಾರಕ್ಕೆ ಆಸ್ಪತ್ರೆ ಸಿಬ್ಬಂದಿ ಗೌರವ ಸಲ್ಲಿಸಿದ್ದಾರೆ. ಚಂದನಳ ಅಂಗಾಂಗಗಳನ್ನು ಮೈಸೂರು ಹಾಗೂ ಬೆಂಗಳೂರಿನ 6 ಮಕ್ಕಳಿಗೆ ಜೋಡಣೆ ಮಾಡಲಾಗಿದೆ. ಇಂದು ಸಂಜೆ ಚಂದನಳ ಅಂತ್ಯಸಂಸ್ಕಾರ ನೆರವೇರಲಿದೆ.

ಇದನ್ನೂ  ಓದಿ : ಬೆಂಗಳೂರು : ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತ ಪತ್ನಿ ಲೈವ್​ ವಿಡಿಯೋ ಮಾಡಿ ಸೂಸೈಡ್..!

Leave a Comment

DG Ad

RELATED LATEST NEWS

Top Headlines

ಮಂಗಳೂರಲ್ಲಿ ಕಿಡಿಗೇಡಿಗಳಿಂದ ಪ್ರಾರ್ಥನಾ ಸ್ಥಳದ ಮೇಲೆ ಕಲ್ಲೆಸೆತ – ಕರಾವಳಿಯ ಅಲ್ಲಲ್ಲಿ ಪರಿಸ್ಥಿತಿ ಉದ್ವಿಗ್ನ..!

ಮಂಗಳೂರು : ಮಂಗಳೂರಿನ ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ನಿನ್ನೆ ರಾತ್ರಿ ಪ್ರಾರ್ಥನಾ ಸ್ಥಳದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ ಘಟನೆ ನಡೆದಿದೆ. ಕಾಟಿಪಳ್ಳ 3ನೇ

Live Cricket

Add Your Heading Text Here