Download Our App

Follow us

Home » ರಾಜಕೀಯ » ಪರಿಷತ್ ಚುನಾವಣೆ : ಬಂಡಾಯವಾಗಿ ಸ್ಪರ್ಧಿಸಿರುವ ಐದು ಅಭ್ಯರ್ಥಿಗಳು ಕಾಂಗ್ರೆಸ್​ನಿಂದ ಉಚ್ಚಾಟನೆ..!

ಪರಿಷತ್ ಚುನಾವಣೆ : ಬಂಡಾಯವಾಗಿ ಸ್ಪರ್ಧಿಸಿರುವ ಐದು ಅಭ್ಯರ್ಥಿಗಳು ಕಾಂಗ್ರೆಸ್​ನಿಂದ ಉಚ್ಚಾಟನೆ..!

ಬೆಂಗಳೂರು : ವಿಧಾನ ಪರಿಷತ್ ಚುನಾವಣೆಯ ಫೈಟ್ ಜೋರಾಗಿದ್ದು, ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ನಲ್ಲಿ ತಂತ್ರಗಾರಿಕೆ ನಡೆಯುತ್ತಿದೆ. ಕರ್ನಾಟಕ ವಿಧಾನ ಪರಿಷತ್​ಗೆ ಈಶಾನ್ಯ – ನೈಋತ್ಯ – ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ – ನೈಋತ್ಯ – ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿ ಒಟ್ಟು 6 ಕ್ಷೇತ್ರಗಳಿಗೆ ಜೂ. 3ರಂದು ಚುನಾವಣೆ ನಡೆಯಲಿದೆ.

ಇದಕ್ಕೆ ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆದರೂ ಕೈ ಟಿಕೆಟ್ ತಪ್ಪಿರುವುದರಿಂದ ಕೆಲ ನಾಯಕರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇದರಿಂದ ಅವರನ್ನು ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ. ​ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಒಟ್ಟು ಐವರು ಬಂಡಾಯ ಅಭ್ಯರ್ಥಿಗಳನ್ನು ಉಚ್ಚಾಟಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ.

ಉಚ್ಚಾಟನೆಗೊಂಡವರು :

  • ನೈಋತ್ಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ -ಎಸ್.ಪಿ.ದಿನೇಶ್
  • ಬೆಂಗಳೂರು ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ- ಫರ್ಡಿನಾಂಡ್ ಲಾರೆನ್ಸ್
  • ನೈಋತ್ಯ ಶಿಕ್ಷಕರ ಕ್ಷೇತ್ರದ ಬಂಡಾಯ ಅಭ್ಯರ್ಥಿ -ಬಿ.ಆರ್‌.ನಂಜೇಶ್‌
  • ಆಗ್ನೇಯ ಶಿಕ್ಷಕರ ಕ್ಷೇತ್ರದ ಬಂಡಾಯ ಅಭ್ಯರ್ಥಿಗಳಾದ ಲೋಕೇಶ್ ತಾಳಿಕಟ್ಟೆ ಮತ್ತು ವಿನೋದ್ ಶಿವರಾಜ್

ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

  • ನೈಋತ್ಯ ಶಿಕ್ಷಕರ ಕ್ಷೇತ್ರ – ಕೆ.ಕೆ. ಮಂಜುನಾಥ್
  • ದಕ್ಷಿಣ ಶಿಕ್ಷಕರ ಕ್ಷೇತ್ರ – ಮರತಿಬ್ಬೇಗೌಡ
  • ಆಗ್ನೇಯ ಶಿಕ್ಷಕರ ಕ್ಷೇತ್ರ – ಡಿ.ಟಿ.ಶ್ರೀನಿವಾಸ್
  • ಈಶಾನ್ಯ ಪದವೀಧರ ಕ್ಷೇತ್ರ – ಡಾ.ಚಂದ್ರಶೇಖರ ಪಾಟೀಲ
  • ನೈಋತ್ಯ ಪದವೀಧರ ಕ್ಷೇತ್ರ – ಆಯನೂರು ಮಂಜುನಾಥ್
  • ಬೆಂಗಳೂರು ಪದವೀಧರ ಕ್ಷೇತ್ರ – ರಾಮೋಜಿ

ಇನ್ನು ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಪ್ರಕಟಿಸಿದೆ. ವಿಧಾನ ಪರಿಷತ್​ನ 6 ಕ್ಷೇತ್ರಗಳ ಪೈಕಿ 2 ಕ್ಷೇತ್ರವನ್ನು ಮಿತ್ರ ಪಕ್ಷ ಜೆಡಿಎಸ್‌ಗೆ ಬಿಜೆಪಿ ಬಿಟ್ಟುಕೊಟ್ಟಿದೆ.

ಇದನ್ನೂ ಓದಿ : ತಾಳ್ಮೆ ಪರೀಕ್ಷಿಸಬೇಡ, ಎಲ್ಲಿದ್ರೂ ಬಂದುಬಿಡು, ಪೊಲೀಸರಿಗೆ ಶರಣಾಗು : ಪ್ರಜ್ವಲ್‌ಗೆ ದೇವೇಗೌಡರ ವಾರ್ನಿಂಗ್..!

 

 

 

 

 

Leave a Comment

DG Ad

RELATED LATEST NEWS

Top Headlines

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್​​ಗೆ ಡಿಕ್ಕಿ ಹೊಡೆದ ಕಾರು – ತಾಯಿ, ಮಗ ಸ್ಥಳದಲ್ಲೇ ಸಾವು..!

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ತಾಯಿ ಮಗ ಬಲಿಯಾಗಿರುವ ಘಟನೆ ನಡೆದಿದೆ. ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಾರಿನಲ್ಲಿ

Live Cricket

Add Your Heading Text Here