Download Our App

Follow us

Home » ರಾಜಕೀಯ » ವಿಧಾನ ಪರಿಷತ್ ಚುನಾವಣೆ : 5 ಕ್ಷೇತ್ರಗಳಲ್ಲಿ ಬಿಜೆಪಿ, 1 ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ..!

ವಿಧಾನ ಪರಿಷತ್ ಚುನಾವಣೆ : 5 ಕ್ಷೇತ್ರಗಳಲ್ಲಿ ಬಿಜೆಪಿ, 1 ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ..!

ಬೆಂಗಳೂರು : ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ವಿಧಾನ ಪರಿಷತ್​ನ 6 ಕ್ಷೇತ್ರಗಳ ಪೈಕಿ 1 ಕ್ಷೇತ್ರವನ್ನು ಮಿತ್ರ ಪಕ್ಷ ಜೆಡಿಎಸ್‌ಗೆ ಬಿಜೆಪಿ ಬಿಟ್ಟುಕೊಟ್ಟಿದೆ.

ಉಳಿದ ಐದು ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದಿಂದ ಅಮರನಾಥ್ ಪಾಟೀಲ್, ಪರಿಷತ್‌ನ ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ ಸರ್ಜಿ, ಪರಿಷತ್‌ನ ಬೆಂಗಳೂರು ಪದವೀಧರ ಕ್ಷೇತ್ರದಿಂದ ಅ.ದೇವೇಗೌಡ, ಪರಿಷತ್‌ನ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿ ಮತ್ತು ವಿಧಾನಪರಿಷತ್‌ನ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಇ.ಸಿ.ನಿಂಗರಾಜು ಅವರನ್ನು ಕಣಕ್ಕಳಿಸಿದೆ. ಜೆಡಿಎಸ್​​ನಿಂದ ಭೋಜರಾಜೇಗೌಡಗೆ ಟಿಕೆಟ್​ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಮೂರು ಶಿಕ್ಷಕರ ಕ್ಷೇತ್ರಗಳಿಗೆ ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ ಮತ್ತು ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ : ಲೈಂಗಿಕ ದೌರ್ಜನ್ಯ ಕೇಸ್ – ಬಿಜೆಪಿ ಮುಖಂಡ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ..!

Leave a Comment

RELATED LATEST NEWS

Top Headlines

ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ : KSRTC ಬಸ್​ ಡ್ರೈವರ್​​ಗೆ ಚಾ*ಕುವಿನಿಂದ ಇರಿದ ಮಿನಿ ಟ್ರಕ್​​ ಡ್ರೈವರ್​​..!

ಬೆಂಗಳೂರು : ವಾಹನವನ್ನು ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ ನಡೆದು KSRTC ಬಸ್​ ಡ್ರೈವರ್​​ಗೆ ಮಿನಿ ಟ್ರಕ್​​ ಡ್ರೈವರ್ ​​ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ

Live Cricket

Add Your Heading Text Here