Download Our App

Follow us

Home » ಸಿನಿಮಾ » ದೀಪಿಕಾ ದಾಸ್ ನಟನೆಯ ‘#ಪಾರುಪಾರ್ವತಿ’ ಚಿತ್ರದ ‘ಇನ್ಫಿನಿಟಿ ರೋಡ್’ ಪೋಸ್ಟರ್ ರಿಲೀಸ್..!

ದೀಪಿಕಾ ದಾಸ್ ನಟನೆಯ ‘#ಪಾರುಪಾರ್ವತಿ’ ಚಿತ್ರದ ‘ಇನ್ಫಿನಿಟಿ ರೋಡ್’ ಪೋಸ್ಟರ್ ರಿಲೀಸ್..!

ರೋಹಿತ್ ಕೀರ್ತಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ “#ಪಾರುಪಾರ್ವತಿ” ಚಿತ್ರದಲ್ಲಿ ಕಿರುತೆರೆ ನಟಿ ದೀಪಿಕಾ ದಾಸ್ ಹಾಗೂ ಪೂನಂ ಸರ್ ನಾಯಕ್ ಮತ್ತು ಫವಾಜ್ ಅಶ್ರಫ್ ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ ಪ್ರೇಂನಾಥ್ ಅವರು ನಿರ್ಮಿಸಿರುವ ಈ ಚಿತ್ರದ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಈಗ ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೆಯುತ್ತಿದೆ.

ಇತ್ತೀಚೆಗೆ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಈ ಪೋಸ್ಟರ್​ಗೆ “ಇನ್ಫಿನಿಟಿ ರೋಡ್” ಎಂದು ಹೆಸರಿಡಲಾಗಿದೆ. ಟ್ರಾವೆಲ್, ಅಡ್ವೆಂಚರ್‌ ಡ್ರಾಮ ಕಥಾಹಂದರ ಹೊಂದಿರುವ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರನ್ನು ಪ್ರಕೃತಿಯ ಮಡಿಲಲ್ಲೇ ಬಿಡುಗಡೆ ಮಾಡಿರುವುದು ವಿಶೇಷ. ಥಾರ್ ಬೆಂಗಳೂರು ಸಂಸ್ಥೆಯ ಸಹಯೋಗದೊಂದಿಗೆ ಇತ್ತೀಚಿಗೆ ಈ ಪೋಸ್ಟರ್ ಬಿಡುಗಡೆ ಸಮಾರಂಭ ನಡೆಯಿತು.

ಪ್ರಕೃತಿ ಸಂರಕ್ಷಣೆಯ ಸಂದೇಶ ನೀಡಲು ಗಿಡ ನೆಡುವುದರ ಮೂಲಕ ಸಮಾರಂಭವನ್ನು ಇನ್ನಷ್ಟು ಅರ್ಥಪೂರ್ಣವಾಗಿ ನಡೆಸಿ ಗಿಡ ನೆಡುವುದು ಮಾತ್ರವಲ್ಲ, ಅದರ ಪೋಷಣೆಗೆ ಬೇಕಾದ ಕ್ರಮಗಳ ಬಗ್ಗೆ ಕೂಡ ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ಸುಮಾರು ನೂರಕ್ಕೂ ಅಧಿಕ ಜನರಿಗೆ ಮನೆಯಲ್ಲೇ ಬೆಳೆಸುವ ಗಿಡಗಳನ್ನು ನೀಡುವ ಮೂಲಕ‌ ಪೋಸ್ಟರ್ ಬಿಡುಗಡೆ ಸಮಾರಂಭವನ್ನು ಆಯೋಜಿಸಲಾಗಿತ್ತು. MRT ಮ್ಯೂಸಿಕ್ ಯೂಟ್ಯೂಬ್ ಚಾನಲ್​​ನಲ್ಲಿ ಫಸ್ಟ್ ಲುಕ್ ಪೋಸ್ಟರ್ ಲಾಂಚ್​ನ ವಿಡಿಯೋ ಬಿಡುಗಡೆಯಾಗಿ ಸಖತ್ ವೈರಲ್ ಆಗುತ್ತಿದೆ.

“ಇನ್ಫಿನಿಟಿ ರೋಡ್” ಪೋಸ್ಟರ್,‌ ಎರಡು ಪಾತ್ರಗಳ ಪ್ರಯಾಣ ಹಾಗೂ ಅವರ ಸಾಹಸಗಳನ್ನು ತೋರಿಸುತ್ತದೆ‌. ಅಂತ್ಯವಿಲ್ಲದ ಅನ್ವೇಷಣೆಯನ್ನು ಪ್ರತಿನಿಧಿಸುತ್ತದೆ. ಫಸ್ಟ್ ಲುಕ್ ಪೋಸ್ಟರ್​ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅಕ್ಟೋಬರ್ 3 ರಂದು ಚಿತ್ರದ ಆಡಿಯೋ ರಿಲೀಸ್ ಆಗಲಿದೆ.‌ ಸದ್ಯದಲ್ಲೇ ಟ್ರೇಲರ್ ಸಹ ಬರಲಿದೆ ಎಂದು ನಿರ್ದೇಶಕ ರೋಹಿತ್ ಕೀರ್ತಿ ತಿಳಿಸಿದ್ದಾರೆ.

ಇದನ್ನೂ ಓದಿ : ವಿಜಯನಗರದಲ್ಲಿ ಲಾರಿ-ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು..!

Leave a Comment

DG Ad

RELATED LATEST NEWS

Top Headlines

ಮಂಡ್ಯದಲ್ಲಿ ಲಾರಿ-ಕಾರು ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಮೂವರು ವಿದ್ಯಾರ್ಥಿಗಳ ದುರ್ಮರಣ..!

ಮಂಡ್ಯ : ಲಾರಿ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯದ ಮಳವಳ್ಳಿ ಚೆನ್ನಗೌಡನ ದೊಡ್ಡಿ ಬಳಿ ನಡೆದಿದೆ.

Live Cricket

Add Your Heading Text Here