ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ A-1 ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪವಿತ್ರಾ ಗೌಡ ಜಾಮೀನು ಅರ್ಜಿ ಸಲ್ಲಿಸಿದ್ದರು. ಆಗಸ್ಟ್ 28 ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿಯ ವಿಚಾರಣೆ ನಡೆದಿತ್ತು, ವಿಚಾರಣೆ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಯ ಆದೇಶವನ್ನು ಆಗಸ್ಟ್ 31ಕ್ಕೆ ಕಾಯ್ದಿರಿದ್ದರು.
ಇಂದು ಪವಿತ್ರಾಗೌಡ ಜಾಮೀನು ಆದೇಶ ಇಂದು ಪ್ರಕಟವಾಗುವ ಸಾಧ್ಯತೆಯಿದೆ. ಪವಿತ್ರಾ ಗೌಡ ಪರ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ಜಾಮೀನು ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಬುಧವಾರ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿಯ ವಿಚಾರಣೆ ನಡೆದಿದ್ದು, ವಿಚಾರಣೆ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಯ ಆದೇಶ ಕಾಯ್ದಿರಿಸಿದ್ದರು.
ಪವಿತ್ರಾ ಗೌಡ ಜೊತೆ ಕೊಲೆ ಕೇಸ್ನ A-7 ಆರೋಪಿಯಾಗಿರುವ ಅನುಕುಮಾರ್ ಜಾಮೀನು ಭವಿಷ್ಯ ಕೂಡ ಇಂದೇ ನಿರ್ಧಾರವಾಗಲಿದೆ.
ಇದನ್ನೂ ಓದಿ : ಸಿಎಂ, ಡಿಸಿಎಂ ನೇತೃತ್ವದಲ್ಲಿಂದು ರಾಜಭವನ ಚಲೋ – ಸಚಿವರು, ಶಾಸಕರ ಸಾಥ್..!
Post Views: 53