ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಲ್ಲಿರುವ ಪವಿತ್ರಾ ಗೌಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಇಂದು 57ನೇ ಸೆಷೆನ್ಸ್ ಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಪವಿತ್ರಾ ಪರ ಹಿರಿಯ ವಕೀಲ ಸೆಬಾಸ್ಟಿಯನ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಕೋರ್ಟ್ ಇಂದು ಅದರ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಲಿದೆ.
ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಬಂಧನವಾದ 72 ದಿನಗಳ ಬಳಿಕ ವಕೀಲರ ಮೂಲಕ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಪವಿತ್ರಾ ಗೌಡ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸೋ ಮುನ್ನವೇ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಕಾರಣಕ್ಕೆ ನಟ ದರ್ಶನ್ ಆಂಡ್ ಗ್ಯಾಂಗ್ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿತ್ತು. ಘಟನೆ ವೇಳೆ ಪವಿತ್ರಾ ಕೂಡಾ ಸ್ಥಳದಲ್ಲಿದ್ದಳು ಎನ್ನುವುದಕ್ಕೆ ಸಾಕಷ್ಟು ಸಾಕ್ಷ್ಯಗಳೂ ಸಿಕ್ಕಿವೆ. ಆ
ಕೆಯ ಚಪ್ಪಲಿಯಲ್ಲಿ ರಕ್ತದ ಕಲೆಯಿದ್ದಿದ್ದು ಎಫ್‌ಎಸ್ಎಲ್ ವರದಿಯಲ್ಲಿ ದೃಢಪಟ್ಟಿತ್ತು. ಇದು ರೇಣುಕಾಸ್ವಾಮಿಯದ್ದೇ ರಕ್ತದ ಕಲೆ ಎನ್ನುವುದು ಖಚಿತವಾಗಿತ್ತು. ಹೀಗಾಗಿ ಪವಿತ್ರಾ ಕೂಡಾ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ. ಇನ್ನು ಸದ್ಯದ ಪರಿಸ್ಥಿತಿ ಪ್ರಕಾರ ಪವಿತ್ರಾ ಗೌಡಗೆ ಈ ಹಂತದಲ್ಲಿ ಜಾಮೀನು ಸಿಗುವುದು ಕಷ್ಟ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ : ಮಂಗಳೂರು : ಕಾಂಗ್ರೆಸ್ MLC ಐವನ್ ಡಿಸೋಜ ಮನೆ ಮೇಲೆ ಕಲ್ಲು ತೂರಾಟ..!