ಬೆಂಗಳೂರು : ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರ ಮೇಲೆ ಆರೋಪಿಗಳು ಪೆಪ್ಪರ್ ಸ್ಪ್ರೇ ದಾಳಿ ನಡೆಸಿದ ಘಟನೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ನವಿಲುನಗರದ ಇಟ್ಟಿಗೆ ಗೂಡಿನಲ್ಲಿ ನಡೆದಿದೆ.
ರೌಡಿ ಶೀಟರ್ ಕ್ಯಾಟ್ ರಾಜನ ಸಹಚರರು ಇಸ್ಪೀಟ್ ಅಡ್ಡೆ ನಡೆಸ್ತಿದ್ದ ಆರೋಪ ಕೇಳಿಬಂದಿದ್ದು, ಸುಮಾರು 30 ಜನ ಲಕ್ಷ ಲಕ್ಷ ಹಣ ಬಾಜಿ ಕಟ್ಟಿ ಇಸ್ಪೀಟ್ ಆಡ್ತಿದ್ದರು ಎನ್ನಲಾಗಿದೆ. ಇಸ್ಪೀಟ್ ಅಡ್ಡೆ ಮೇಲಿನ ದಾಳಿ ವೇಳೆ ಪೊಲೀಸರ ಮೇಲೆ ಆರೋಪಿಗಳು ಪೆಪ್ಪರ್ ಸ್ಪ್ರೇ ಹೊಡೆದಿದ್ದು, ಆ ಬಳಿಕ ಮಚ್ಚಿನಿಂದ ಹಲ್ಲೆಗೂ ಮುಂದಾಗಿದ್ದರು ಎಂದು ತಿಳಿದುಬಂದಿದೆ.
ಪೊಲೀಸರ ದಾಳಿ ವೇಳೆ ಕೆಲವರು ಸ್ಥಳದಲ್ಲಿದ್ದ ಹಣದ ಸಮೇತ ಎಸ್ಕೇಪ್ ಆಗಿದ್ದು, ಸದ್ಯ ಇಸ್ಪೀಟ್ ಆಡ್ತಿದ್ದ 13 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನು ಸ್ಥಳದಲ್ಲಿದ್ದ 3.80 ಲಕ್ಷ ನಗದು, ಒಂದು ಆಟೊ ರಿಕ್ಷಾ, 2 ಕಾರ್, 6 ಬೈಕ್ , 3 ಸೆಟ್ ಕಾರ್ಡ್ಸ್ , 1 ಮಚ್ಚು, 1 ಪೆಪ್ಪರ್ ಸ್ಪ್ರೇ , 13 ಮೊಬೈಲ್ಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಆಸ್ಪತ್ರೆ ಸೇರಿದ ದಾಸನಿಗೆ ಟ್ರೀಟ್ಮೆಂಟ್ ಸ್ಟಾರ್ಟ್.. ದರ್ಶನ್‌ಗೆ ನಿಜಕ್ಕೂ ಏನಾಗಿದೆ? ವೈದ್ಯರು ಕೊಟ್ರು ಮಹತ್ವದ ಮಾಹಿತಿ..!