ಬೆಳಗಾವಿ : ಗ್ರಾಪಂ ಕಚೇರಿಗೆ ಬೆಂಕಿ ಬಿದ್ದಿರುವ ಘಟನೆ ಬೆಳಗಾವಿಯ ಕಾಲಕಾಂಬದಲ್ಲಿ ನಡೆದಿದೆ. ಕಿಡಿಗೇಡಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ ಎಂದು ಶಂಕಿಸಲಾಗಿದೆ. ನಿನ್ನೆ ಗ್ರಾಮ ಪಂಚಾಯಿತಿಯಲ್ಲಿ ಎರಡು ಗುಂಪುಗಳ ಮಧ್ಯೆ ತೀವ್ರ ಗಲಾಟೆಯಾಗಿತ್ತು. ಇದೇ ವಿಚಾರಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ತಡರಾತ್ರಿ ಆಗಮಿಸಿದ್ದ ದುಷ್ಕರ್ಮಿಗಳು ಬಿಯರ್ ಬಾಟಲ್ನಲ್ಲಿ ಪೆಟ್ರೋಲ್ ಸುರಿದು ಬಟ್ಟೆಗಳನ್ನ ಎಸೆದು ಬೆಂಕಿ ಹಚ್ಚಿದ್ದಾರೆ. ಅಷ್ಟೇ ಅಲ್ಲದೆ ಅಲ್ಲಿದ್ದ ಸಿಸಿಟಿವಿಗಳನ್ನ ತೆಗೆದುಕೊಂಡು ಹೋಗಿದ್ದಾರೆ.
ಸಾಕ್ಷಿ ನಾಶ ಮಾಡಲು ಸಿಸಿಟಿವಿ ಕಿತ್ತುಕೊಂಡು ಹೋಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಸಿಸಿ ಕ್ಯಾಮೆರಾ ಸೇರಿದಂತೆ ಸ್ಥಳ ಪರಿಶೀಲನೆ ಮಾಡಿದ್ದಾರೆ. ಈ ಘಟನೆ ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ : ‘ಮರ್ಯಾದೆ ಪ್ರಶ್ನೆ’ ಚಿತ್ರತಂಡದಿಂದ ಚಾಲಕರ ದಿನಾಚರಣೆ ಆಚರಣೆ..!
Post Views: 41