Download Our App

Follow us

Home » ರಾಷ್ಟ್ರೀಯ » ಬ್ರೆಜಿಲ್‌ನಲ್ಲಿ ಭೀಕರ ವಿಮಾನ ದುರಂತ – 62 ಮಂದಿ ಸಾವು, ಆಕಾಶದಿಂದ ವಿಮಾನ ನೆಲಕ್ಕಪ್ಪಳಿಸುವ ವಿಡಿಯೋ ವೈರಲ್​..!

ಬ್ರೆಜಿಲ್‌ನಲ್ಲಿ ಭೀಕರ ವಿಮಾನ ದುರಂತ – 62 ಮಂದಿ ಸಾವು, ಆಕಾಶದಿಂದ ವಿಮಾನ ನೆಲಕ್ಕಪ್ಪಳಿಸುವ ವಿಡಿಯೋ ವೈರಲ್​..!

ಬ್ರೆಜಿಲ್‌ : ಬ್ರೆಜಿಲ್‌ನಲ್ಲಿ ಭಾರೀ ವಿಮಾನ ದುರಂತ ಸಂಭವಿಸಿಸಿದೆ. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಇದ್ದಕ್ಕಿದ್ದಂತೆ ಪತನಗೊಂಡಿದೆ. ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ವಿಮಾನ ಭೂಮಿಗೆ ಅಪ್ಪಳಿಸಿದ್ದು, ಭೀಕರ ದುರಂತದಲ್ಲಿ ನಾಲ್ವರು ಸಿಬ್ಬಂದಿ, 58 ಪ್ರಯಾಣಿಕರು ಸೇರಿ ವಿಮಾನದಲ್ಲಿ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ವಿಷಯವನ್ನು ಬ್ರೆಜಿಲ್‌ನ ರಾಷ್ಟ್ರೀಯ ಮಾಧ್ಯಮಗಳು ಖಚಿತಪಡಿಸಿವೆ.

ಪತನಗೊಂಡ ಕೆಲವೇ ಸೆಕೆಂಡ್‌ಗಳಲ್ಲಿ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಲೂ ಹೊಗೆ ಆವರಿಸಿತ್ತು. ಇದರಿಂದಾಗಿ ವಿಮಾನದಲ್ಲಿದ್ದ ಎಲ್ಲರೂ ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದಾರೆ. ಏರ್​​ಬಸ್​ ಮತ್ತು ಇಟಾಲಿಯನ್​ ಏರ್​​ವೇಸ್ ಜಂಟಿ ಒಡೆತನದ “ATR 72-500 ಟರ್ಬೋಟಾಪ್”​​ವಿಮಾನವು ಬ್ರೆಜಿಲ್‌ನ ಸಾವೋ ಪೌಲೋದಲ್ಲಿ ಪತನಗೊಂಡಿದೆ. ವಿಮಾನವು ಬ್ರೆಜಿಲ್‌ನ ಪರಾನಾ ರಾಜ್ಯದ ಕ್ಯಾಸ್ಕಾವೆಲ್‌ನಿಂದ ಹೊರಟು ಸಾವೊ ಪಾಲೊ ರಾಜ್ಯದ ಗೌರುಲ್ಹೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು.

ಅಪಘಾತದ ಬಗ್ಗೆ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಆಘಾತ ವ್ಯಕ್ತಪಡಿಸಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣ ಭದ್ರತಾ ಸಿಬ್ಬಂದಿ, ಪೊಲೀಸರು ಮತ್ತು ಸೇನಾ ಪಡೆಗಳು ರಕ್ಷಣಾ ಕ್ರಮಗಳನ್ನು ಕೈಗೊಂಡಿದ್ದು, ಕಾರ್ಯಚರಣೆ ಮುಂದುವರೆಸಿದೆ.

ಇದನ್ನೂ ಓದಿ : ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಆರನೇ ಪದಕ – ಕುಸ್ತಿಯಲ್ಲಿ ಕಂಚು ಗೆದ್ದ ಅಮನ್ ಸೆಹ್ರಾವತ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here