ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಕರ್ನಾಟಕದ ಮುಡಾ ಪ್ರಕರಣದ ಪ್ರಸ್ತಾಪವಾಗಿದೆ. ಸೋನಿಪತ್ನಲ್ಲಿ ಇಂದು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದ ಮುಡಾ ಹಗರಣವನ್ನು ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ, ಕಾಂಗ್ರೆಸ್ ಸರ್ಕಾರ ಇದ್ದಲ್ಲಿ ಕರಪ್ಷನ್ ಇದ್ದೇ ಇರುತ್ತೆ. ಕರ್ನಾಟಕದ ಸಿಎಂ ಭೂ ಹಗರಣದಲ್ಲಿ ಸಿಲುಕಿದ್ದಾರೆ, ಸರ್ಕಾರ ರಚನೆಯಾಗಿ 2 ವರ್ಷದಲ್ಲೇ ಹಗರಣದಲ್ಲಿ ಮುಳುಗಿದೆ. ಕರ್ನಾಟಕದಲ್ಲಿ ಯಾವ ಪರಿಸ್ಥಿತಿ ನೋಡಿ, ಹೈಕೋರ್ಟ್ ತನಿಖೆಗೆ ಆದೇಶಿಸಿ ಸಿಎಂ ವಿರುದ್ಧ ಚಾಟಿ ಬೀಸಿದೆ, ಹೈಕಮಾಂಡ್ ಭ್ರಷ್ಟವಾದಾಗ ಕೆಳಗಿದ್ದವರೂ ಲೂಟಿ ಮಾಡ್ತಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ದಲಿತರು, ಹಿಂದುಳಿದ ಜಾತಿಗಳಿಗೆ ಸೇರಿದ ಜನರಿಗೆ ನಿರಂತರವಾಗಿ ಮೋಸ ಮಾಡುತ್ತಾ ಬಂದಿದೆ. ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟವಿದೆ. ಇದು ಈ ಹಿಂದೆ ಮಾಡಿರುವ ಪಾಪದ ಫಲ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಹರಿಯಾಣದಲ್ಲಿ ದಲಿತರಿಗೆ ಅನ್ಯಾಯವಾಗದ ಒಂದು ವರ್ಷವೂ ಇರಲಿಲ್ಲ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ : MLA ಸ್ಥಾನದಿಂದ ಮುನಿರತ್ನರನ್ನು ಉಚ್ಛಾಟನೆ ಮಾಡಿ – ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ಡಾ.ಪಿ ಮೂರ್ತಿ ಆಗ್ರಹ..!