Download Our App

Follow us

Home » ರಾಜಕೀಯ » ನಮ್ಮ ಸರ್ಕಾರ ಯಾರನ್ನೂ ರಕ್ಷಣೆ ಮಾಡುವ ಉದ್ದೇಶ ಹೊಂದಿಲ್ಲ – ಪ್ರಜ್ವಲ್​​ ಕೇಸ್​ ಬಗ್ಗೆ ಮೌನ ಮುರಿದ ಪ್ರಧಾನಿ ಮೋದಿ..!

ನಮ್ಮ ಸರ್ಕಾರ ಯಾರನ್ನೂ ರಕ್ಷಣೆ ಮಾಡುವ ಉದ್ದೇಶ ಹೊಂದಿಲ್ಲ – ಪ್ರಜ್ವಲ್​​ ಕೇಸ್​ ಬಗ್ಗೆ ಮೌನ ಮುರಿದ ಪ್ರಧಾನಿ ಮೋದಿ..!

ನವದೆಹಲಿ : ಪ್ರಜ್ವಲ್​​ ರೇವಣ್ಣ ಪ್ರಕರಣ ಅತ್ಯಂತ ಖಂಡನೀಯ. ಈ ಪ್ರಕರಣವನ್ನು ನಾವ್ಯಾರೂ ಸಹಿಸುವುದಿಲ್ಲ ಎಂದು ಪ್ರಜ್ವಲ್​​ ರೇವಣ್ಣ ಪೆನ್​​ಡ್ರೈವ್​​ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದಿದ್ದಾರೆ.

ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಪ್ರಜ್ವಲ್​​ ರೇವಣ್ಣ ಪ್ರಕರಣದ ಬಗ್ಗೆ  ಮಾತನಾಡಿದ ಪ್ರಧಾನಿ ಮೋದಿ ಅವರು, ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ. ಕರ್ನಾಟಕದ ಸರ್ಕಾರವೇ ಪ್ರಜ್ವಲ್​ ಹೊರಹೋಗಲು ಅವಕಾಶ ಮಾಡಿಕೊಟ್ಟಿದೆ. ಇದು ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯವಾಗಿರುವ ಕಾರಣ ಕ್ರಮ ಜರುಗಿಸುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲೆ ಇದೆ.

ಸಹಸ್ರಾರು ವಿಡಿಯೋಗಳ ಇವೆ ಎಂದಾದರೆ ಅವು ಜೆಡಿಎಸ್ ಪಕ್ಷ, ಕಾಂಗ್ರೆಸ್​ನೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಅವಧಿಯದ್ದಾಗಿವೆ ಎನ್ನುವುದು ತಿಳಿದುಬಂದಿದೆ. ಅವರು ಅಧಿಕಾರದಲ್ಲಿ ಇದ್ದಾಗ ಆ ವಿಡಿಯೋಗಳನ್ನು ಒಟ್ಟುಗೂಡಿಸಿಕೊಂಡು, ಈಗ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಒಕ್ಕಲಿಗರು ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಆ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಮೋದಿ ಆರೋಪಿಸಿದ್ದಾರೆ.

ಜೆಡಿಎಸ್ ಸಂಸದನನ್ನು ದೇಶದಿಂದ ಹೊರಗೆ ಕಳುಹಿಸಿದ ನಂತರ ವೀಡಿಯೊಗಳನ್ನು ಬಿಡುಗಡೆ ಮಾಡಲಾಗಿದೆ. ಈ ಬೆಳವಣಿಗೆಯು ತುಂಬಾ ಅನುಮಾನಾಸ್ಪದವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ರಾಜ್ಯ ಸರ್ಕಾರಕ್ಕೆ ಮಾಹಿತಿ ಇದ್ದಿದ್ದರೆ ನಿಗಾ ಇಡಬೇಕಿತ್ತು. ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಬೇಕಿತ್ತು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೋದಿ ಕಿಡಿಕಾರಿದ್ದಾರೆ.

ನೀವು(ಕಾಂಗ್ರೆಸ್‌ ಸರ್ಕಾರ) ಏನನ್ನೂ ಮಾಡಲಿಲ್ಲ. ಕನಿಷ್ಠ ಪಕ್ಷ ಕೇಂದ್ರಕ್ಕೂ ತಿಳಿಸಲಿಲ್ಲ. ಅಂದರೆ ಇದು ಪೊಲಿಟಿಕಲ್ ಗೇಮ್ ಆಗಿತ್ತು ಎಂಬುದು ನಿಜ. ಯಾವುದೇ ಅಪರಾಧಿಗಳನ್ನು ಬಿಡಬಾರದು ಎನ್ನುವುದಷ್ಟೇ ನಮ್ಮ ಉದ್ದೇಶ.ನಮ್ಮ ಸರ್ಕಾರ ಯಾರನ್ನೂ ರಕ್ಷಣೆ ಮಾಡುವ ಉದ್ದೇಶ ಹೊಂದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ

ಇದನ್ನೂ ಓದಿ : ಲೋಕಸಭಾ ಚುನಾವಣೆ 2024 : ಕುಟುಂಬ ಸಮೇತ ಬಂದು ಹಕ್ಕು ಚಲಾಯಿಸಿದ ರಾಜಕೀಯ ನಾಯಕರು..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here