ಬೆಂಗಳೂರು : ರಾಮಮಂದಿರ ಉದ್ಘಾಟನೆಗೂ ಮುನ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನವರಿ 19ರ ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಬೆಂಗಳೂರಿನಲ್ಲಿ 7 ಕಿಲೋ ಮೀಟರ್ ನಮೋ ರೋಡ್ ಶೋ ನಡೆಸಲು ಬಿಜೆಪಿ ಭರ್ಜರಿ ಪ್ಲಾನ್ ನಡೆಸಿದೆ.
ನಮೋಗೆ ಭರ್ಜರಿ ಸ್ವಾಗತ ನೀಡಲು ರಾಜ್ಯಾಧ್ಯಕ್ಷ ವಿಜಯೇಂದ್ರ ಸಜ್ಜಾಗಿದ್ದು, ವಿಜಯೇಂದ್ರ ರಾಜ್ಯಾಧ್ಯಕ್ಷರಾದ ನಂತರ ನಮೋ ಮೊದಲ ಭೇಟಿಯಾಗಿದೆ. ಏರೋನಾಟಿಕ್ಸ್ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು PIETSಗೆ ತೆರಳುವ ಸಂದರ್ಭದಲ್ಲಿ ಮೋದಿ ಅವರು ಬೆಂಗಳೂರಿಗೂ ಭೇಟಿ ನೀಡಲಿದ್ದು,ಈ ಸಂದರ್ಭದಲ್ಲಿ ರೋಡ್ ಶೋ ನಡೆಸುವ ಸಾಧ್ಯತೆಯಿದೆ. ಆದಿವಾಸಿಗಳ ಜತೆ ನಮೋ ಸಂವಾದ ಸಾಧ್ಯತೆಯಿದೆ.
ನಮೋ ಭೇಟಿ ಹಿನ್ನೆಲೆಯಲ್ಲಿ ಶುಕ್ರವಾರ ನಡೆಯಬೇಕಿದ್ದ BJP ಕಾರ್ಯಕಾರಣಿ ಸಭೆಯನ್ನು ಮುಂದೂಡಲಾಗಿದೆ. ಬಿಜೆಪಿ ಕಚೇರಿಯಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ನಮೋಗೆ ಭರ್ಜರಿ ಸ್ವಾಗತ ನೀಡುವ ಸಂಬಂಧ ಮಹತ್ವದ ಸಭೆ ನಡೆಸಲಾಗಿದೆ.
ಚಂದ್ರಯಾನ ಸಕ್ಸಸ್ ಸಂದರ್ಭದಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸುವುದಕ್ಕೆಂದೇ ಪ್ರಧಾನಿ ಮೋದಿ ಬೆಂಗಳೂರಿಗೆ ಬಂದಿದ್ದರು. ಆ ಸಂದರ್ಭ ಪ್ರಧಾನಿಯವರು ರೋಡ್ ಶೋ ಮಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ನಾಯಕರು ಹೇಳಿಕೆ ನೀಡಿ ನಂತರ ಮುಜುಗರಕ್ಕೀಡಾದ ಸನ್ನಿವೇಶ ಸೃಷ್ಟಿಯಾಗಿತ್ತು. ಯಾಕೆಂದರೆ, ಬಿಜೆಪಿ ನಾಯಕರ ಹೇಳಿಕೆಗಳ ಬೆನ್ನಲ್ಲೇ ರೋಡ್ ಶೋ ಉದ್ದೇಶವಿಲ್ಲ ಎಂದು ಪ್ರಧಾನಿ ಕಾರ್ಯಾಲಯದಿಂದ ಮಾಹಿತಿ ಬಂದಿತ್ತು.
ಇದನ್ನೂ ಓದಿ : ಕಲರ್ಸ್ಕನ್ನಡದಲ್ಲಿ ಹೊಸ ಧಾರಾವಾಹಿ; ‘ಶ್ರೀ ಗೌರಿ’ಎಂಟ್ರಿಗೆ ಕೌಂಟ್ಡೌನ್