Download Our App

Follow us

Home » ರಾಜಕೀಯ » ಪೋಕ್ಸೋ ಪ್ರಕರಣ : ಇಂದು ಸಿಐಡಿಯಿಂದ ಮಾಜಿ ಸಿಎಂ ಬಿಎಸ್‌ವೈ ವಿಚಾರಣೆ..!

ಪೋಕ್ಸೋ ಪ್ರಕರಣ : ಇಂದು ಸಿಐಡಿಯಿಂದ ಮಾಜಿ ಸಿಎಂ ಬಿಎಸ್‌ವೈ ವಿಚಾರಣೆ..!

ಬೆಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಸಿಐಡಿ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ಪ್ರಕರಣದ ವಿಚಾರಣೆಗೆ ಹಾಜರಾಗಲು ಸೂಚಿಸಿ ಸಿಐಡಿ ಪೊಲೀಸರು 2ನೇ ನೋಟಿಸ್ ಜಾರಿ ಮಾಡಿದ್ದರಿಂದ ಮತ್ತು ನಗರದ 1ನೆ ತ್ವರಿತಗತಿ ನ್ಯಾಯಾಲಯ (ಪೋಕ್ಸೋ ವಿಶೇಷ ನ್ಯಾಯಾಲಯ) ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಯಡಿಯೂರಪ್ಪಗೆ ಬಂಧನ ಭೀತಿ ಎದುರಾಗಿತ್ತು. ಆದರೆ, ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ, ಮುಂದಿನ ವಿಚಾರಣೆವರೆಗೂ ಬಂಧನದಂತ ಕಠಿಣ ಕ್ರಮಕ್ಕೆ ಮುಂದಾಗದಂತೆ ಸೂಚನೆ ನೀಡಿತ್ತು.

ಜತೆಗೆ, ಸಿಐಡಿ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಜೂ.17ರಂದು ಯಡಿಯೂರಪ್ಪ ವಿಚಾರಣೆಗೆ ಹಾಜರಾಗಬೇಕು ಎಂದು ನ್ಯಾಯಪೀಠ ಸೂಚಿಸಿತ್ತು. ಅದರಂತೆ ಇಂದು ಬಿ.ಎಸ್. ಯಡಿಯೂರಪ್ಪ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ : ರೇಣುಕಾಸ್ವಾಮಿ ಹತ್ಯೆ ಕೇಸ್​ : ನಾಪತ್ತೆಯಾಗಿದ್ದ ಡಿ-ಗ್ಯಾಂಗ್‌ನ 9ನೇ ಆರೋಪಿ ಅರೆಸ್ಟ್​..!

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here