Download Our App

Follow us

Home » ಜಿಲ್ಲೆ » ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಚರಣೆ – ಅಕ್ರಮವಾಗಿ ನೆಲೆಸಿದ್ದ 9 ಬಾಂಗ್ಲಾದೇಶಿ ಪ್ರಜೆಗಳು ವಶಕ್ಕೆ..!

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಚರಣೆ – ಅಕ್ರಮವಾಗಿ ನೆಲೆಸಿದ್ದ 9 ಬಾಂಗ್ಲಾದೇಶಿ ಪ್ರಜೆಗಳು ವಶಕ್ಕೆ..!

ಉಡುಪಿ : ಮಲ್ಪೆಯಲ್ಲಿ ಕಳೆದ ಮೂರು ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದ 9 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಉಡುಪಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್, ಮೊಹಮ್ಮದ್ ಸೋಜಿಬ್, ಕಾಜೋಲ್, ಉಸ್ಮಾನ್ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳಾಗಿದ್ದಾರೆ.

ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿಕೊಂಡು ಬಂದಿದ್ದ ಬಾಂಗ್ಲಾದೇಶೀಯರನ್ನು ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಪೈಕಿ ಉಸ್ಮಾನ್ ಉಳಿದವರನ್ನು ಅಕ್ರಮವಾಗಿ ಕರೆತಂದು ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದ ಎನ್ನಲಾಗಿದೆ. ಆರೋಪಿಗಳು ಸಿಕ್ಕಿಂನಲ್ಲಿ ನಕಲಿ ಆಧಾರ್‌ ಕಾರ್ಡ್‌ ಸೃಷ್ಟಿಸಿದ್ದರು. ಆರೋಪಿಗಳಲ್ಲಿ ಕಾಜೋಲ್ ಎಲ್ಲರ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿದ್ದ.

ಸಿಕ್ಕಿಬಿದ್ದಿದ್ದು ಹೇಗೆ? ಮಾಣಿಕ್‌ ಹುಸೈನ್‌ ಎಂಬಾತ ನಕಲಿ ಪಾಸ್‌ಪೋರ್ಟ್‌ ಬಳಸಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ದುಬೈ ಪರಾರಿಯಾಗಲು ಯತ್ನಿಸಿದ್ದ. ವಿಮಾನ‌ ನಿಲ್ದಾಣದಲ್ಲಿ ದಾಖಲಾತಿ ಪರಿಶೀಲಿಸುವ ಸಂದರ್ಭದಲ್ಲಿ ಅನುಮಾನಗೊಂಡ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಅಕ್ರಮವಾಗಿ ಬಾಂಗ್ಲಾದೇಶದಿಂದ ನುಸುಳಿ ನಕಲಿ ಆಧಾರ್‌ ಕಾರ್ಡ್‌, ಪಾಸ್‌ಪೋರ್ಟ್‌ ಪಡೆದ ವಿಚಾರ ಬೆಳಕಿಗೆ ಬಂದಿತ್ತು.

ಕೂಡಲೇ ವಿಮಾನ ನಿಲ್ದಾಣದ ಅಧಿಕಾರಿಗಳು ಈತನ ಬಗ್ಗೆ ಬಜ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈತನನ್ನು ಬಂಧಿಸಿದ ಬಳಿಕ ಈತನೊಂದಿಗೆ ಮತ್ತಷ್ಟು ಜನ ಬಾಂಗ್ಲಾದೇಶಿ ಪ್ರಜೆಗಳು ದೇಶದೊಳಗೆ ನುಸುಳಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈತ ನೀಡಿದ ಮಾಹಿತಿ ಆಧಾರದಲ್ಲಿ ಮತ್ತೆ 9 ಮಂದಿಯನ್ನು ಉಡುಪಿಯ ಮಲ್ಪೆ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಬೆಂಗಳೂರು : ಈವೆಂಟ್​ ಮ್ಯಾನೇಜ್ಮೆಂಟ್​​ ಹೆಸರಲ್ಲಿ ಹೈಟೆಕ್​ ವೇಶ್ಯಾವಾಟಿಕೆ ದಂಧೆ ನಡೆಸ್ತಿದ್ದ ದಂಪತಿ ಅರೆಸ್ಟ್..!

Leave a Comment

DG Ad

RELATED LATEST NEWS

Top Headlines

ತಾಯಿಗೆ ಮರು ಪ್ರೀತಿ, ಹೊಸ ಜೀವನ.. ಹೆತ್ತಮ್ಮನಿಗೇ 2ನೇ ಮದುವೆ ಮಾಡಿಸಿದ ಪುತ್ರ..!

ಪತಿಯನ್ನು ಕಳೆದುಕೊಂಡು ಒಂಟಿಯಾಗಿದ್ದ ತಾಯಿಗೆ ಮಗನೇ ಮುಂದೆ ನಿಂತು ಮದುವೆ ಮಾಡಿಸಿದ ಅಚ್ಚರಿಯ ಘಟನೆಯೊಂದು ನಡೆದಿದೆ. 18 ವರ್ಷ ತಾಯಿ ಜೊತೆಗಿದ್ದ ಮಗ ಅಬ್ದುಲ್ ಅಹಾದ್ ಬಹಳ

Live Cricket

Add Your Heading Text Here