Download Our App

Follow us

Home » ಜಿಲ್ಲೆ » ಕಲಬುರಗಿಯಲ್ಲಿ ಮತ್ತೆ ಸದ್ದು ಮಾಡಿದ ಪೊಲೀಸರ ಪಿಸ್ತೂಲ್ – ಕೊಲೆ ಆರೋಪಿ ಕಾಲಿಗೆ ಗುಂಡೇಟು..!

ಕಲಬುರಗಿಯಲ್ಲಿ ಮತ್ತೆ ಸದ್ದು ಮಾಡಿದ ಪೊಲೀಸರ ಪಿಸ್ತೂಲ್ – ಕೊಲೆ ಆರೋಪಿ ಕಾಲಿಗೆ ಗುಂಡೇಟು..!

ಕಲಬುರಗಿ : ರೌಡಿಶೀಟರ್ ಖಲೀಲ್ ಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬನ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಗರದ ಆಝಾದ್​ಪುರ ರೋಡ್ ಹತ್ತಿರ ನಡೆದಿದೆ. ಪ್ರಮುಖ ಆರೋಪಿ ಯಾದುಲ್ಲ ಕಾಲೋನಿಯ ನಿವಾಸಿ ಸಯ್ಯದ್ ಕೌಸರ್(40) ಎಂದು ತಿಳಿದುಬಂದಿದೆ.

ಸಯ್ಯದ್ ಕೌಸರ್ ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ. ವಿವಿ ಪೊಲೀಸ್ ಠಾಣೆಯ ವ್ಯಾಪ್ತಿಯ ಇಬ್ಬರು ಕಾನ್​ಸ್ಟೇಬಲ್ ಸಿಬ್ಬಂದಿ ನಿನ್ನೆ ಆರೋಪಿಯನ್ನು ಬಂಧಿಸಲು ಹೋದಾಗ, ಆರೋಪಿಯು ಪೊಲೀಸರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಈ ವೇಳೆ ತಮ್ಮ ಜೀವ ರಕ್ಷಣೆಗಾಗಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.

ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಯಾಸೀನ್ ಮತ್ತು ಸಂಜೀವ್ ಕುಮಾರ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆರೋಪಿಯ ಕಾಲಿಗೆ ಗುಂಡು ತಾಗಿರುವುದಾಗಿ ತಿಳಿದುಬಂದಿದೆ.

ಇದನ್ನೂ ಓದಿ : ದೈತ್ಯ ಹೆಬ್ಬಾವಿಗೆ ಮುತ್ತಿಡಲು ಹೋಗಿ ಕಚ್ಚಿಸಿಕೊಂಡ ಯುವಕ – ವಿಡಿಯೋ ವೈರಲ್​​..!

Leave a Comment

DG Ad

RELATED LATEST NEWS

Top Headlines

ರೋಮ್ಯಾನ್ಸ್ ಸೀನ್​ ಶೂಟಿಂಗ್ ಮಾಡುವಾಗ ಕಂಟ್ರೋಲ್ ತಪ್ಪಿದ್ರಾ ವರುಣ್ ಧವನ್ ? – ನಟಿ ಜೊತೆಗಿನ ಹಾಟ್​ ವಿಡಿಯೋ ಲೀಕ್​!

ಮುಂಬೈ : ಬಾಲಿವುಡ್​ನಲ್ಲಿ ಯಂಗ್ ಹೀರೋ ಆಗಿ ಗುರುತಿಸಿಕೊಂಡಿರುವ ನಟ ವರುಣ್ ಧವನ್ ಸಿನಿಮಾದ ರೋಮ್ಯಾನ್ಸ್ ಸೀನ್​ ಶೂಟಿಂಗ್ ವೇಳೆ ಕಂಟ್ರೋಲ್ ತಪ್ಪಿದ್ರಾ ಎಂಬ ಚರ್ಚೆಗಳು ಶುರುವಾಗಿವೆ. ನಟ

Live Cricket

Add Your Heading Text Here