Download Our App

Follow us

Home » ಅಪರಾಧ » ಬೆಂಗಳೂರು : ಮಸಾಜ್ ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಸ್ಪಾ ಮೇಲೆ ಪೊಲೀಸರ ದಾಳಿ..!

ಬೆಂಗಳೂರು : ಮಸಾಜ್ ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಸ್ಪಾ ಮೇಲೆ ಪೊಲೀಸರ ದಾಳಿ..!

ಬೆಂಗಳೂರು : ಬೆಂಗಳೂರಿನಲ್ಲಿ ಮಸಾಜ್ ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಸ್ಪಾ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದ್ದ ರೋರಾ ಲಕ್ಸುರಿ ಥಾಯ್ ಸ್ಪಾ ಮೇಲೆ ಈಶಾನ್ಯ ವಿಭಾಗದ ಡಿಸಿಪಿ ಸೂಚನೆ ಮೇರೆಗೆ ದಾಳಿ ನಡೆಸಿದ್ದಾರೆ.

ಈ ಸ್ಪಾ ದಲ್ಲಿ ವಿದೇಶಿ ಮಹಿಳೆಯರ ಬಳಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಥಾಯ್ಲೆಂಡ್​ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಆರೋಪಿಗಳು ಟೂರಿಸ್ಟ್ ವೀಸಾ ಹಾಗೂ ಬಿಸಿನೆಸ್ ವೀಸಾ ಮೇಲೆ ಬಂದಿದ್ದರು.

ಆರೋಪಿಗಳಾದ ಆಂಜನೇಯ ಗೌಡ , ಆಂಜನೇಯ ರೆಡ್ಡಿ ಹಾಗೂ ಹರೀಶ್ ಎಂಬುವರನ್ನು ಇದೀಗ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. 7 ಮಂದಿ ಯುವತಿಯರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಈ ಬಗ್ಗೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

ಇದನ್ನೂ ಓದಿ : ಆನೇಕಲ್ : ನಡುರಸ್ತೆಯಲ್ಲೇ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಹ*ತ್ಯೆ..!

Leave a Comment

DG Ad

RELATED LATEST NEWS

Top Headlines

ಕೊನೆಗೂ ಮಾಜಿ ಡಾನ್ ಮುತ್ತಪ್ಪ ರೈ ಆಸ್ತಿ ವಿವಾದ ಇತ್ಯರ್ಥ – ಎರಡನೇ ಪತ್ನಿಗೆ ಸಿಕ್ಕ ಆಸ್ತಿ ಎಷ್ಟು?

ಬೆಂಗಳೂರು : ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಸಾವಿನ ಬಳಿಕ ಭಾರೀ ಸದ್ದು ಮಾಡಿದ್ದ ಆಸ್ತಿ ವಿವಾದಕ್ಕೆ ಕೊನೆಗೂ ಬ್ರೇಕ್​ ಬಿದ್ದಿದೆ. ಬೆಂಗಳೂರಿನ 19ನೇ

Live Cricket

Add Your Heading Text Here