Download Our App

Follow us

Home » ಅಪರಾಧ » ವಿಜಯಪುರ : ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.93 ಕೋಟಿ ಹಣವನ್ನು ವಶಕ್ಕೆ ಪಡೆದ ಸಿಇಎನ್ ಪೊಲೀಸರು..!

ವಿಜಯಪುರ : ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.93 ಕೋಟಿ ಹಣವನ್ನು ವಶಕ್ಕೆ ಪಡೆದ ಸಿಇಎನ್ ಪೊಲೀಸರು..!

ವಿಜಯಪುರ : ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನಲೆಯಲ್ಲಿ ಪೊಲೀಸರು ರಾಜ್ಯಾದ್ಯಂತ ಹದ್ದಿನ ಕಣ್ಣಿಟ್ಟಿದ್ದಾರೆ.  ಚುನಾವಣಾ ನೀತಿ ಸಂಹಿತೆ ಜಾರಿಯಾದ  ಬೆನ್ನಲ್ಲೇ ವಿಜಯಪುರ ನಗರದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿ ದಾಖಲೆ ಇಲ್ಲದ 2.93 ಕೋಟಿ ವಶಕ್ಕೆ ಪಡೆದಿದ್ದಾರೆ. 

ಟೋಯೊಟಾ ಕಾರಿನಲ್ಲಿ 2 ಕೋಟಿ 93 ಲಕ್ಷ 50 ಸಾವಿರ ರೂಪಾಯಿ ಹಣವನ್ನು ಹೈದ್ರಾಬಾದ್‌ನಿಂದ ಹುಬ್ಬಳ್ಳಿಗೆ ಸಾಗಿಸುತ್ತಿದ್ದರು. ಲೋಕಸಭೆ ಎಲೆಕ್ಷನ್​ ಹಿನ್ನಲೆ ಸಿಇಎನ್ ಪೊಲೀಸರು ಕಟ್ಟುನಿಟ್ಟಿನ ಪರಿಶೀಲನೆ ನಡೆಸುತ್ತಿದ್ದು, ತಪಾಸಣೆ ವೇಳೆ ಯಾವುದೇ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಹಣವನ್ನು ಜಪ್ತಿ ಮಾಡಿದ್ದಾರೆ.

ಇನ್ನು ಕಾರ್ಯಾಚರಣೆ ನಡೆಸಿದ ಪೊಲೀಸರು ಟೋಯೋಟಾ ಕಾರು, ನಗದು ಹಣ ಹಾಗೂ ಎರಡು ಮೊಬೈಲ್​ನ್ನು ವಶಕ್ಕೆ ಪಡೆದಿದ್ದು, ಆರೋಪಿಗಳಾದ ಬಾಲಾಜಿ ನಿಕ್ಕಂ, ಸಚಿನ್‌ ಮೋಯಿತೆ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಗೋಳಗುಮ್ಮಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ವಿಜಯಪುರದಲ್ಲಿ ಕುಡಿಯುವ ನೀರಿಗಾಗಿ ಟವರ್ ಏರಿ ಯುವಕನ ಹುಚ್ಚಾಟ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here