ಬೆಂಗಳೂರು : ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿ ಹಿನ್ನೆಲೆ ನಿನ್ನೆ ಸಂಜೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು. ಈ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಕರೆದಿದ್ದರು.
ಈ ವೇಳೆ ಕುಮಾರಸ್ವಾಮಿ ಬೇಲ್ ಮೇಲೆ ಇದ್ದಾರೆ ರಾಜೀನಾಮೆ ಕೊಟ್ರಾ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಗುಡುಗಿದ ಅವರು, ಸುಮ್ಮನೆ ರಾಜೀನಾಮೆ ಕೊಡಲು ನನಗೆ ತಲೆ ಕೆಟ್ಟಿಲ್ಲ. ನಿಮ್ಮ ರೀತಿ ಭಂಡತನದ ರಾಜಕೀಯ ಮಾಡಲ್ಲ. ನಾನು ತಪ್ಪು ಮಾಡಿರೋದಕ್ಕೆ ದಾಖಲೆ ತೋರಿಸಿ. ನಿಮ್ಮ ಪ್ರಕರಣದಲ್ಲಿ ಸಾಲು ಸಾಲು ದಾಖಲೆಗಳಿವೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದೀರ್ಘ ಸುದ್ದಿಗೋಷ್ಠಿ ಮಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಸರ್ಕಾರ ಸೇಡಿನ ರಾಜಕಾರಣಕ್ಕೆ ಇಳಿದಿದ್ದು, ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ರಾಜಭವನ ಸರ್ಚ್ ಮಾಡುವಷ್ಟು ಉದ್ಧಟತನಕ್ಕೆ ಈ ಸರ್ಕಾರ ಬಂದಿದೆ ಎಂದು ಗುಡುಗಿದ್ದಾರೆ.
ಇದನ್ನೂ ಓದಿ : ಹೊಸೂರು ಟಾಟಾ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ – ಕೋಟ್ಯಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ..!