Download Our App

Follow us

Home » ಸಿನಿಮಾ » ಪೋಸ್ಟರ್​​ನಲ್ಲೇ ಕುತೂಹಲ ಮೂಡಿಸಿದೆ ಝೈದ್ ಖಾನ್ ನಟನೆಯ ನೂತನ ಚಿತ್ರ..!

ಪೋಸ್ಟರ್​​ನಲ್ಲೇ ಕುತೂಹಲ ಮೂಡಿಸಿದೆ ಝೈದ್ ಖಾನ್ ನಟನೆಯ ನೂತನ ಚಿತ್ರ..!

“ಬನಾರಸ್” ಚಿತ್ರದ ಮೂಲಕ ಕನ್ನಡಿಗರ ಮನ ಗೆದ್ದಿರುವ ಝೈದ್ ಖಾನ್ ಹಾಗೂ ಈ ವರ್ಷದ ಮೊದಲ ಹಿಟ್ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ಕಾಂಬಿನೇಶನ್ ನಲ್ಲಿ ನೂತನ ಚಿತ್ರ ಆರಂಭವಾಗುತ್ತಿರುವುದು ಇತ್ತೀಚಿಗೆ ತಿಳಿಸಲಾಗಿತ್ತು. ಈ ಕುರಿತಂತೆ ಪೋಸ್ಟರ್ ಚಿತ್ರತಂಡದಿಂದ ಬಿಡುಗಡೆಯಾಗಿದೆ‌‌. ಈ ಹೊಸಚಿತ್ರ, ಪೋಸ್ಟರ್ ನಲ್ಲೇ ಕುತೂಹಲ ಮೂಡಿಸಿದೆ. ಸದ್ಯದಲ್ಲೇ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಪೋಸ್ಟರ್ ಮೂಲಕ ತಿಳಿಸಲಾಗಿದೆ‌.

ಪೋಸ್ಟರ್ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇನ್ನು ಈ ನೂತನ ಚಿತ್ರದ ಫಸ್ಟ್ ಲುಕ್ ಹೇಗಿರಬಹುದೆಂಬ? ಕುತೂಹಲ ಅಭಿಮಾನಿ ವಲಯದಲ್ಲಿದೆ. ಫಸ್ಟ್ ಲುಕ್ ನಲ್ಲೇ ಚಿತ್ರದ ಶೀರ್ಷಿಕೆ ಸಹ ಅನಾವರಣವಾಗಲಿದೆ‌.

ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಎರಡನೇ ಚಿತ್ರವಿದು. ಆಶ್ರಿತ್ ಸಿನಿಮಾಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣವಾಗಲಿದ್ದು, ರಚನೆ ಹಾಗೂ ನಿರ್ದೇಶನ ಅನಿಲ್ ಕುಮಾರ್ ಅವರದು. ಜೆ.ಎಸ್ ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಇದನ್ನೂ ಓದಿ : ಲೋಕಸಭೆ ಎಲೆಕ್ಷನ್ ಹಿನ್ನೆಲೆ UPSC ಪ್ರಿಲಿಮ್ಸ್ ಪರೀಕ್ಷೆ ಮುಂದೂಡಿಕೆ..! 

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ – ಆಟೋ ಚಾಲಕ ದುರ್ಮರಣ..!

ಬೆಂಗಳೂರು : ನಗರದಲ್ಲಿ ಸೆ.6ರ ತಡರಾತ್ರಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಚಾಲಕ ಸಾವನ್ನಪಿರುವ ಘಟನೆ ಜ್ಞಾನಭಾರತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ. ಕಿರಣ್(32) ಅಪಘಾತದಲ್ಲಿ ಮೃತನಾದ

Live Cricket

Add Your Heading Text Here