Download Our App

Follow us

Home » ರಾಜ್ಯ » ಸುಪ್ರೀಂ ಆದೇಶದಂತೆ 5, 8, 9ನೇ ತರಗತಿ ಪರೀಕ್ಷೆ ಮುಂದೂಡಿಕೆ : ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ..!

ಸುಪ್ರೀಂ ಆದೇಶದಂತೆ 5, 8, 9ನೇ ತರಗತಿ ಪರೀಕ್ಷೆ ಮುಂದೂಡಿಕೆ : ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ..!

ಬೆಂಗಳೂರು : ರಾಜ್ಯದಲ್ಲಿ ಪಬ್ಲಿಕ್‌ ಪರೀಕ್ಷೆಗೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ 5,8 ಮತ್ತು 9ನೇ ತರಗತಿಗೆ ಮಾರ್ಚ್‌ 13ರಿಂದ 16ರವರೆಗೆ ನಡೆಯಬೇಕಾಗಿದ್ದ ಮೌಲ್ಯಾಂಕನ ಪರೀಕ್ಷೆಯನ್ನು ಮುಂದಿನ ಸೂಚನೆವರೆಗೆ ಮುಂದೂಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು ಹೊರಡಿಸಿರುವ ಈ ಸುತ್ತೋಲೆಯಲ್ಲಿ 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯ ಕ್ರಮ ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಬೇಕಾಗಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಕಟಿಸಿದೆ.

ಸರ್ಕಾರ ಮತ್ತು ಖಾಸಗಿ ಶಾಲೆಗಳ ನಡುವಿನ ಜಟಾಪಟಿಯ ಕಾರಣಕ್ಕೆ 5, 8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಗೊಂದಲ ಮಯವಾಗಿದ್ದು ವಿದ್ಯಾರ್ಥಿ ಹಾಗೂ ಪೋಷಕರು ಪರದಾಡುವಂತಾಗಿದೆ. ಒಟ್ನಲ್ಲಿ ಹಠಕ್ಕೆ ಬಿದ್ದಂತೆ ಪಬ್ಲಿಕ್ ಮಾದರಿಯಲ್ಲಿ ಪರೀಕ್ಷೆ ನಡೆಸಲು ಮುಂದಾಗಿರುವ ಶಿಕ್ಷಣ ಇಲಾಖೆಯ ನಡೆ ಮಕ್ಕಳ ಪಾಲಿಗ ಅದೇಷ್ಟು ಉಪಯುಕ್ತವೋ ಗೊತ್ತಿಲ್ಲ. ಆದ್ರೆ ಈಗ ಈ ಪರೀಕ್ಷೆಗಳಿಗೆ ಬ್ರೇಕ್ ಬಿದಿದ್ದು ವಿದ್ಯಾರ್ಥಿಗಳಿಗೆ ಹಾಗು ಪೋಷಕರಿಗೆ ಗೊಂದಲ ಶುರುವಾಗಿದೆ. ಹೀಗಾಗಿ ಸರ್ಕಾರ ಮುಂದೆ ಪರೀಕ್ಷೆಗಳ ವಿಚಾರದಲ್ಲಿ ಯಾವ ಹೆಜ್ಜೆ ಇಡುತ್ತೆ ಅಂತಾ ಕಾದು ನೋಡಬೇಕಿದೆ.

ಇದನ್ನೂ ಓದಿಮಾರ್ಚ್ 22 ರಿಂದ ಚಿತ್ರಮಂದಿರಗಳಿಗೆ “ಲೈನ್ ಮ್ಯಾನ್” ಆಗಮನ..!

Leave a Comment

DG Ad

RELATED LATEST NEWS

Top Headlines

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ : ಪುರುಷರ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ನವದೀಪ್ ಸಿಂಗ್..!

ಪ್ಯಾರಿಸ್ : ಪ್ಯಾರಾಲಿಂಪಿಕ್ಸ್​ನಲ್ಲಿ ಶನಿವಾರ ನಡೆದ ಪುರುಷರ ಜಾವೆಲಿನ್ ಥ್ರೋ ಎಫ್​41 ಸ್ಪರ್ಧೆಯಲ್ಲಿ ಭಾರತದ ಜಾವೆಲಿನ್ ಎಸೆತಗಾರ ನವದೀಪ್ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ. 47.32 ಮೀಟರ್‌ ದೂರಕ್ಕೆ

Live Cricket

Add Your Heading Text Here