ಬೆಂಗಳೂರು : ನಿಂತಿದ್ದ ಮಹಿಳೆಯ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲದ ಚಿಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿಕ್ಕನಹಳ್ಳಿ ಗ್ರಾಮದ ನಿವಾಸಿ ಮಂಜಮ್ಮ(50) ಮೃತ ದುರ್ದೈವಿ.
ಈ ದುರ್ಘಟನೆ ಇಂದು ಬೆಳಿಗ್ಗೆ 10ಗಂಟೆ ಸುಮಾರಿಗೆ ನಡೆದಿದ್ದು, ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಅವಧಿ ಮುಗಿಯೋವರೆಗೂ ಸಿದ್ದರಾಮಯ್ಯನವ್ರೇ ಸಿಎಂ – ಡಿ.ಕೆ ಸುರೇಶ್..!
Post Views: 97