ಟಾಲಿವುಡ್ ಸೂಪರ್ ಸ್ಟಾರ್ ಪ್ರಭಾಸ್ 2025ರ ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ತಮ್ಮ ಮುಂದಿನ ಬಹುನಿರೀಕ್ಷಿತ ಚಿತ್ರ ‘ದಿ ರಾಜಾ ಸಾಬ್’ನ ಹೊಸ ಪೋಸ್ಟರ್ ಅನಾವರಣಗೊಳಿಸಿದ್ದಾರೆ. ಮಾರುತಿ ನಿರ್ದೇಶನದ ಪೋಸ್ಟರ್ ಬಿಡುಗಡೆಯೊಂದಿಗೆ ಅಭಿಮಾನಿಗಳ ಉತ್ಸಾಹ ಹೆಚ್ಚಿಸಿದ್ದಾರೆ. ಹಬ್ಬದ ಶುಭಾಶಯಗಳ ಜೊತೆಗೆ ಅಭಿಮಾನಿಗಳಿಗೆ ಸಂದೇಶವನ್ನೂ ಕೊಟ್ಟಿದ್ದಾರೆ.
ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ಟಿ ಜಿ ವಿಶ್ವ ಪ್ರಸಾದ್ ನಿರ್ಮಾಣ ಮಾಡಿರುವ ಬಹುನಿರೀಕ್ಷಿತ ಚಿತ್ರ “ದಿ ರಾಜಾ ಸಾಬ್”. ದೊಡ್ಡ ಪರದೆಗಳಲ್ಲಿ ಡಾರ್ಲಿಂಗ್ ಪ್ರಭಾಸ್ ಅತ್ಯುತ್ತಮ ಮನರಂಜನೆಯ ರಸದೌತಣ ನೀಡಲು ಸಿದ್ಧರಾಗಿದ್ದು, ಶೀಘ್ರದಲ್ಲೇ ರೊಮ್ಯಾಂಟಿಕ್ ಕಾಮಿಡಿ ಜಾನರ್ನ ಈ ಚಿತ್ರ ತೆರೆಗೆ ಬರಲಿದೆ. ನಿಮಗೆ ಸಂತೋಷಕರ ಮತ್ತು ಸಂತೋಷದಾಯಕ ಸಂಕ್ರಾಂತಿಯ ಶುಭಾಶಯಗಳು ಎಂದು ” ದಿ ರಾಜಾ ಸಾಬ್” ಚಿತ್ರದ ನಾಯಕ ಪ್ರಭಾಸ್ ಹಾಗೂ ಚಿತ್ರತಂಡ ಸಮಸ್ತರಿಗು ತಿಳಿಸಿದ್ದಾರೆ.
ಮಾಳವಿಕಾ ಮೋಹನನ್, ನಿಧಿ ಅಗರ್ವಾಲ್ ಮತ್ತು ರಿದ್ಧಿ ಕುಮಾರ್ ಕೂಡ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಾಲಿವುಡ್ ಸ್ಟಾರ್ ಹೀರೋ ಸಂಜಯ್ ದತ್ ಪ್ರಮುಖ ಪಾತ್ರದಲ್ಲಿದ್ದಾರೆ. ಸಿನಿಮಾದ ಸಂಗೀತವನ್ನು ತಮನ್ ಎಸ್ ಸಂಯೋಜಿಸಿದ್ದಾರೆ. ಕಾರ್ತಿಕ್ ಪಳನಿ ಅವರ ಕ್ಯಾಮರಾ ಕೈಚಳಕವಿದೆ. ಚಿತ್ರವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ನಿರ್ಮಿಸಿದೆ. ಏಪ್ರಿಲ್ 10ರಂದು ಚಿತ್ರ ತೆರೆಕಾಣಲಿದ್ದು, ಪ್ರೇಕ್ಷಕರು ‘ದಿ ರಾಜಾ ಸಾಬ್’ ಮೇಲೆ ಸಾಕಷ್ಟು ನಿರೀಕ್ಷೆಗಳನ್ನಿಟ್ಟುಕೊಂಡಿದ್ದಾರೆ.
ಇದನ್ನೂ ಓದಿ : ಬೆಂಗಳೂರಲ್ಲಿ ಹಾಡಹಗಲೇ ಪುಂಡರ ಅಟ್ಟಹಾಸ.. ಚಾಕು ತೋರಿಸಿ ಬಟ್ಟೆ ವ್ಯಾಪಾರಿಗೆ ರಾಬರಿ..!