ಹುಬ್ಬಳ್ಳಿ : ರಾಜ್ಯದಲ್ಲಿ ಹರಾಜ್ ರೀತಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳ ವರ್ಗಾವಣೆಯಲ್ಲಿ ಸರ್ಕಾರ ಟೆಂಡರ್ ನೀತಿ ಅನುಸರಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಟೆಂಡರ್ ನಲ್ಲಿ ಸ್ಲ್ಯಾಬ್ ವಿಧಿಸಿದಂತೆ, ಅಧಿಕಾರಿಗಳ ವರ್ಗಾವಣೆಯಲ್ಲಿ ಸಹ ಕಾಂಗ್ರೆಸ್ನವರು ಆಯಾ ದರ್ಜೆ, ಶ್ರೇಣಿ, ಹುದ್ದೆ, ಪ್ರದೇಶವರು ರೇಟ್ ಸ್ಲ್ಯಾಬ್ ಹಾಕಿ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ ಎಂದು ಹರಿಹಾಯ್ದರು. ಹೀಗೆ ವರ್ಗಾವಣೆ ಪಡೆದ ಅಧಿಕಾರಿಗಳು ಅನಿವಾರ್ಯವಾಗಿ ಕಲೆಕ್ಷನ್ ಅಲ್ಲಿ ನಿರತರಾಗುತ್ತಾರೆ. ಇದು ಅಧಿಕಾರಿಗಳ ತಪ್ಪಲ್ಲ, ನಮ್ಮ ವ್ಯವಸ್ಥೆಯ ಲೋಪ. ಕಾಂಗ್ರೆಸ್ ಹಿಂದಿನಿಂದಲೂ ಈ ರೀತಿ ಭ್ರಷ್ಟಾಚಾರ ವ್ಯವಸ್ಥೆಯನ್ನು ಪೋಷಿಸಿಕೊಂಡು ಬಂದಿದೆ ಎಂದು ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆಯೇ ಇಲ್ಲವಾಗಿದೆ. ಅಪರಾಧಿ ಕೃತ್ಯಗಳು ಹೆಚ್ಚುತ್ತಲೇ ಇವೆ. ಅಪರಾಧಿಗಳನ್ನು ಬೆಂಬಲಿಸುತ್ತ ಪೊಲೀಸ್ ಅಧಿಕಾರಿಗಳ ಕೈ ಕಟ್ಟಿ ಹಾಕಿದ್ದಾರೆ ಎಂದು ಕಿಡಿಕಾರಿದ್ಧಾರೆ.
ಇದನ್ನೂ ಓದಿ : ವಯನಾಡು ಭೂಕುಸಿತದ ಸಂತ್ರಸ್ತರಿಗೆ ನೆರವಾದ ಮೆಗಾಸ್ಟಾರ್ ಫ್ಯಾಮಿಲಿ, ಭಾರೀ ದೇಣಿಗೆ ಘೋಷಣೆ..!