Download Our App

Follow us

Home » ಅಪರಾಧ » ಅತ್ಯಾಚಾರ ಪ್ರಕರಣ : ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ..!

ಅತ್ಯಾಚಾರ ಪ್ರಕರಣ : ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ..!

ಬೆಂಗಳೂರು : ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಜಾಮೀನು ಅರ್ಜಿ ಸಲ್ಲಿಸಿದ್ದ ಪ್ರಜ್ವಲ್ ರೇವಣ್ಣಗೆ ಇದೀಗ ಬಿಗ್ ಶಾಕ್ ಎದುರಾಗಿದೆ. ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ ಅರ್ಜಿಗಳನ್ನು ಹೈಕೋರ್ಟ್​ ವಜಾಗೊಳಿಸಿದೆ.

ಮೂರು ಅರ್ಜಿಗಳನ್ನು ವಿಚಾರಣೆ ನಡೆಸಿ ಕೋರ್ಟ್​ ತೀರ್ಪು ಕಾಯ್ದಿರಿಸಿತ್ತು. ಇದೀಗ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮೂರು ಅರ್ಜಿಗಳನ್ನು ವಜಾಗೊಳಿಸಿದೆ.

ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ಸೈಬರ್ ಸೆಲ್ ನಲ್ಲಿ ದಾಖಲಾಗಿದ್ದ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ಪರಪ್ಪನ ಅಗ್ರಹಾರದಲ್ಲಿರುವ ಪ್ರಜ್ವಲ್ ರೇವಣ್ಣ ಅವರು ನಾಲ್ಕು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನೂ ಓದಿ : BJP ಎಂಎಲ್​ಸಿ ಸ್ಥಾನಕ್ಕೆ ಸಿ.ಪಿ. ಯೋಗೇಶ್ವರ್​​ ರಾಜೀನಾಮೆ?

Leave a Comment

DG Ad

RELATED LATEST NEWS

Top Headlines

ಚನ್ನಪಟ್ಟಣದಿಂದ ನಾನು ಸ್ಪರ್ಧೆ ಮಾಡೋದು ಕನ್ಫರ್ಮ್, ಗುರುವಾರವೇ ನಾಮಪತ್ರ ಸಲ್ಲಿಸುತ್ತೇನೆ – ಸಿ.ಪಿ ಯೋಗೇಶ್ವರ್..!

ರಾಮನಗರ : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಚುನಾವಣಾ ಅಖಾಡ ರಂಗೇರಿದೆ. ಇದರ ಬೆನ್ನಲ್ಲೇ ಬಿಜೆಪಿ ವಿಧಾನಪರಿಷತ್ (MLC) ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು

Live Cricket

Add Your Heading Text Here