ಬೆಂಗಳೂರು : ಲೋಕಸಭೆ ಚುನಾವಣೆಯ ಹೊತ್ತಿನಲ್ಲೇ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ಕೆಲ ದೃಶ್ಯಗಳು ಹರಿದಾಡಿದ್ದು, ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇದೀಗ ಈ ಬಗ್ಗೆ ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿ, ಯಾರೇ ತಪ್ಪು ಮಾಡಿದ್ರೂ ಉಪ್ಪು ತಿಂದವರೂ ನೀರು ಕುಡಿಯಬೇಕು. ತಪ್ಪು ಮಾಡಿದ್ದಾರೆ ನಾವು ಯಾರನ್ನೂ ಕ್ಷಮಿಸೋ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ನಮ್ಮ ಫ್ಯಾಮಿಲಿ ಮಹಿಳೆಯರಿಗೆ ಅತ್ಯಂತ ಗೌರವ ಕೊಟ್ಟಿದೆ. ಸರ್ಕಾರ ಎಸ್.ಐ.ಟಿ ತನಿಖೆಗೆ ಈಗಾಗಲೇ ಆದೇಶ ಮಾಡಿದೆ. ಸಂಪೂರ್ಣವಾಗಿ ತನಿಖೆ ನಡೆದು ಸತ್ಯಾಂಶ ಹೊರಬರಲಿದೆ. ಪ್ರಜ್ವಲ್ ವಿದೇಶಕ್ಕೆ ಹೋಗಿದ್ರೆ ಎಸ್.ಐ.ಟಿ ತಂದ ಕರೆತರಲಿ ಎಂದು ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ : ನಾವು ಗ್ಯಾರೆಂಟಿಗೆ ದುಡ್ಡು ಕೇಳಿಲ್ಲ, ಬರಗಾಲಕ್ಕೆ ದುಡ್ಡು ಕೇಳಿದ್ವಿ – ಕೇಂದ್ರದ ವಿರುದ್ಧ ಸಿಎಂ ಸಿದ್ದು ಕೆಂಡ..!