Download Our App

Follow us

Home » ರಾಜಕೀಯ » ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ಔಟ್ ನೋಟಿಸ್ ಜಾರಿ..!

ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ಔಟ್ ನೋಟಿಸ್ ಜಾರಿ..!

ಬೆಂಗಳೂರು : ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಲುಕ್​​ಔಟ್ ನೋಟಿಸ್ ಬಗ್ಗೆ ಕಲಬುರಗಿಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.

ವಿಮಾನ ನಿಲ್ದಾಣದ ಇಮಿಗ್ರೇಷನ್ ಲುಕ್ಔಟ್ ನೋಟಿಸ್ ಸರ್ವ್ ಮಾಡಲಾಗಿದೆ.  ಎಲ್ಲಾ ಏರ್ಪೋರ್ಟ್ ಇಮಿಗ್ರೇಷನ್​​ ವಿಬಾಗಕ್ಕೆ  SIT ಅಧಿಕಾರಿಗಳು ನೋಟಿಸ್ ರವಾನಿಸಿದ್ದಾರೆ. ಈ ಮೂಲಕ ಲೊಕೇಟ್ ಆದ ಕೂಡಲೇ ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆಯಲು ಸೂಚನೆ ನೀಡಿದ್ದಾರೆ.

ಲುಕ್​​​ಔಟ್ ನೋಟಿಸ್ ಬಗ್ಗೆ ಕಲಬುರಗಿಯಲ್ಲಿ ಮಾಹಿತಿ ನೀಡಿದ ಡಾ.ಜಿ.ಪರಮೇಶ್ವರ್ ಅವರು, ಪ್ರಜ್ವಲ್ ರೇವಣ್ಣ ಹೊರ ದೇಶಕ್ಕೆ ಹೋಗುವಾಗ ಕೇಂದ್ರ ಡಿಪ್ಲೋಮ್ಯಾಟಿಕ್ ಪಾಸ್ಪೋರ್ಟ್ ನೀಡಿದೆ.
ಡಿಪ್ಲೋಮ್ಯಾಟಿಕ್ ಪಾಸ್ಪೋರ್ಟ್​ಗೆ ಹೆಚ್ಚಿನ ಪ್ರಶ್ನೆಗಳನ್ನು ಕೇಳೋದಿಲ್ಲ. ಈಗಾಗಲೇ ಪ್ರಜ್ವಲ್ ರೇವಣ್ಣಗೆ ಲುಕ್ಔಟ್ ನೋಟಿಸ್ ನೀಡಲಾಗಿದೆ. ಪ್ರಜ್ವಲ್ ಪರ ವಕೀಲರು ಸಮಯ ಕೇಳಿದ್ದಾರೆ. ಆದರೆ
ಇಂಥಾ ಪ್ರಕರಣಗಳಲ್ಲಿ ಕಾಲಾವಕಾಶ ಕೊಡಲು ಆಗೋದಿಲ್ಲ. ಹೀಗಾಗಿ ಅರೆಸ್ಟ್ ಮಾಡಲು SIT ಎಲ್ಲಾ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ನಾನು ಬೆನ್ನ ಹಿಂದೆ ಫೈಟ್ ಮಾಡಲ್ಲ, ಬೀದಿಯಲ್ಲೇ ಫೈಟ್ ಮಾಡ್ತೀನಿ : ಹೆಚ್​ಡಿಕೆ ಹೇಳಿಕೆಗೆ ಡಿಕೆಶಿ ತಿರುಗೇಟು..!

Leave a Comment

DG Ad

RELATED LATEST NEWS

Top Headlines

ಸ್ಟಾರ್ ನಿರ್ದೇಶಕ ಎ.ಪಿ ಅರ್ಜುನ್ ವಿರುದ್ಧ ನಡೆಯುತ್ತಿದ್ಯಾ ಪಿತೂರಿ?

ಬೆಂಗಳೂರು : ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಸಿನಿಮಾ ವಿವಾದದಲ್ಲಿ ಸಿಲುಕಿದೆ. ನಿರ್ಮಾಪಕರಿಂದ 2.5 ಕೋಟಿ ರೂಪಾಯಿ ಪಡೆದು ಡಿಜಿಟಲ್ ಟೆರೆನ್ ಸಂಸ್ಥೆ ಗ್ರಾಫಿಕ್ಸ್

Live Cricket

Add Your Heading Text Here