ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ಹಲ್ ಚಲ್ ಎಬ್ಬಿಸಿದೆ. ಪೆನ್ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಸದ್ಯ ಪೆನ್ ಡ್ರೈವ್ ಸುಳಿಯಲ್ಲಿ ಸಿಲುಕಿರುವ ಪ್ರಜ್ವಲ್ ರೇವಣ್ಣ ಇಂದು ಜರ್ಮನಿಯ ಮ್ಯೂನಿಚ್ ಏರ್ಪೋರ್ಟ್ನಿಂದ ಹೊರಟು ಬೆಂಗಳೂರಿಗೆ ಬರುವ ಸಾಧ್ಯತೆಯಿದೆ.
ಲುಫ್ತಾನ್ಸಾ ಏರ್ಲೈನ್ಸ್ ಇಂದು ಮಧ್ಯಾಹ್ನ 12:05ಕ್ಕೆ ಮ್ಯೂನಿಚ್ ಏರ್ಪೋರ್ಟ್ನಿಂದ ಹೊರಟು ರಾತ್ರಿ 12:30ಕ್ಕೆ ಬೆಂಗಳೂರಿಗೆ ಆಗಮಿಸಲಿದೆ. ಈ ವಿಮಾನದಲ್ಲಿ ಪ್ರಜ್ವಲ್ ರೇವಣ್ಣ ಆಗಮಿಸುವ ನಿರೀಕ್ಷೆಯಿದೆ. ಪ್ರಜ್ವಲ್ ರೇವಣ್ಣ ಈ ಫ್ಲೈಟ್ನಲ್ಲಿ ಬುಸಿನೆಸ್ ಕ್ಲಾಸ್ನ 6ಜಿ ಸೀಟ್ ಟಿಕೆಟ್ ಬುಕ್ ಮಾಡಿದ್ದಾರೆ. ಇಲ್ಲಿಯವರೆಗೆ ಟಿಕೆಟ್ ಕ್ಯಾನ್ಸಲ್ ಮಾಡಿಲ್ಲ. ಕೊನೆ ಕ್ಷಣದಲ್ಲಿ ಟಿಕೆಟ್ ಕ್ಯಾನ್ಸಲ್ ಮಾಡದೇ ಇದ್ದರೆ ಪ್ರಜ್ವಲ್ ರೇವಣ್ಣ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಪ್ರಜ್ವಲ್ಗಾಗಿ ಕಳೆದ 15 ದಿನಗಳಿಂದ SIT ತಂಡ ಕೆಂಪೇಗೌಡ ಇಂಟರ್ನ್ಯಾಷನಲ್ ಏರ್ಪೋರ್ಟ್ನ ಮೇಲೆ ಕಣ್ಣಿಟ್ಟಿದ್ದು, ಏರ್ಪೋರ್ಟ್ಗೆ ಪ್ರಜ್ವಲ್ ಬಂದ ಕೂಡಲೇ ಅರೆಸ್ಟ್ ಮಾಡೋದು ಫಿಕ್ಸ್ ಎಂದು ಹೇಳಲಾಗುತ್ತಿದೆ. ಪ್ರಜ್ವಲ್ ಈಗಾಗ್ಲೇ 4 ಬಾರಿ ಟಿಕೆಟ್ ಬುಕ್ ಮಾಡಿ ಕ್ಯಾನ್ಸಲ್ ಮಾಡಿದ್ದಾರೆ. ಇವತ್ತಿಗೆ ಬುಕ್ ಮಾಡಿರುವ ಟಿಕೆಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಕೇಸ್ : ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಮನೆ ಮೇಲೆ SIT ರೇಡ್..!