Download Our App

Follow us

Home » ಅಪರಾಧ » ಇಂದೇ ಜರ್ಮನಿಯಿಂದ ಹೊರಟು ಬೆಂಗಳೂರಿಗೆ ಬರ್ತಾರಾ ಪ್ರಜ್ವಲ್‌ ರೇವಣ್ಣ?

ಇಂದೇ ಜರ್ಮನಿಯಿಂದ ಹೊರಟು ಬೆಂಗಳೂರಿಗೆ ಬರ್ತಾರಾ ಪ್ರಜ್ವಲ್‌ ರೇವಣ್ಣ?

ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ಹಲ್ ಚಲ್ ಎಬ್ಬಿಸಿದೆ. ಪೆನ್​ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಸದ್ಯ ಪೆನ್‌ ಡ್ರೈವ್‌ ಸುಳಿಯಲ್ಲಿ ಸಿಲುಕಿರುವ ಪ್ರಜ್ವಲ್‌ ರೇವಣ್ಣ ಇಂದು ಜರ್ಮನಿಯ ಮ್ಯೂನಿಚ್ ಏರ್​ಪೋರ್ಟ್​ನಿಂದ ಹೊರಟು ಬೆಂಗಳೂರಿಗೆ ಬರುವ ಸಾಧ್ಯತೆಯಿದೆ.

ಲುಫ್ತಾನ್ಸಾ ಏರ್‌ಲೈನ್ಸ್ ಇಂದು ಮಧ್ಯಾಹ್ನ 12:05ಕ್ಕೆ ಮ್ಯೂನಿಚ್ ಏರ್​ಪೋರ್ಟ್​ನಿಂದ ಹೊರಟು ರಾತ್ರಿ 12:30ಕ್ಕೆ ಬೆಂಗಳೂರಿಗೆ ಆಗಮಿಸಲಿದೆ. ಈ ವಿಮಾನದಲ್ಲಿ ಪ್ರಜ್ವಲ್‌ ರೇವಣ್ಣ ಆಗಮಿಸುವ ನಿರೀಕ್ಷೆಯಿದೆ. ಪ್ರಜ್ವಲ್‌ ರೇವಣ್ಣ ಈ ಫ್ಲೈಟ್​ನಲ್ಲಿ ಬುಸಿನೆಸ್‌ ಕ್ಲಾಸ್​ನ 6ಜಿ ಸೀಟ್ ಟಿಕೆಟ್‌ ಬುಕ್‌ ಮಾಡಿದ್ದಾರೆ. ಇಲ್ಲಿಯವರೆಗೆ ಟಿಕೆಟ್‌ ಕ್ಯಾನ್ಸಲ್‌ ಮಾಡಿಲ್ಲ. ಕೊನೆ ಕ್ಷಣದಲ್ಲಿ ಟಿಕೆಟ್‌ ಕ್ಯಾನ್ಸಲ್‌ ಮಾಡದೇ ಇದ್ದರೆ ಪ್ರಜ್ವಲ್‌ ರೇವಣ್ಣ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಪ್ರಜ್ವಲ್​​ಗಾಗಿ ಕಳೆದ 15 ದಿನಗಳಿಂದ SIT ತಂಡ ಕೆಂಪೇಗೌಡ ಇಂಟರ್​ನ್ಯಾಷನಲ್ ಏರ್​ಪೋರ್ಟ್​ನ ಮೇಲೆ ಕಣ್ಣಿಟ್ಟಿದ್ದು, ಏರ್​​ಪೋರ್ಟ್​ಗೆ ಪ್ರಜ್ವಲ್ ಬಂದ ಕೂಡಲೇ ಅರೆಸ್ಟ್ ಮಾಡೋದು ಫಿಕ್ಸ್ ಎಂದು ಹೇಳಲಾಗುತ್ತಿದೆ. ಪ್ರಜ್ವಲ್ ಈಗಾಗ್ಲೇ 4 ಬಾರಿ ಟಿಕೆಟ್ ಬುಕ್​ ಮಾಡಿ ಕ್ಯಾನ್ಸಲ್​ ಮಾಡಿದ್ದಾರೆ. ಇವತ್ತಿಗೆ ಬುಕ್​ ಮಾಡಿರುವ ಟಿಕೆಟ್ ಸೋಷಿಯಲ್​ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ : ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್​ ಕೇಸ್​ : ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಮನೆ ಮೇಲೆ SIT ರೇಡ್​..!

Leave a Comment

RELATED LATEST NEWS

Top Headlines

ಪಠಾಣ್​ ಸಿನಿಮಾಗೆ ಸೆಡ್ಡು ಹೊಡೆದ ಕೆಡಿ : ದುಬಾರಿ ಮೊತ್ತಕ್ಕೆ ಚಿತ್ರದ ಆಡಿಯೋ ರೈಟ್ಸ್ ಸೇಲ್..!

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾದ ರಿಲೀಸ್ ಡೇಟ್​​ನ್ನು ಇತ್ತೀಚೆಗಷ್ಟೆ ಘೋಷಿಸಲಾಗಿದೆ. ಅದರ ಬೆನ್ನಲೇ ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದ ಬಿಡುಗಡೆ ಬಗ್ಗೆ

Live Cricket

Add Your Heading Text Here