Download Our App

Follow us

Home » ರಾಜಕೀಯ » ಆರ್‌ಎಸ್‌ಎಸ್‌ ಬಗ್ಗೆ ತಿಳಿದುಕೊಳ್ಳದೆ ಮಾತನಾಡಿದ್ದೇನೆ : ಕ್ಷಮೆಯಾಚಿಸಿದ ಪ್ರಜ್ವಲ್ ರೇವಣ್ಣ..!

ಆರ್‌ಎಸ್‌ಎಸ್‌ ಬಗ್ಗೆ ತಿಳಿದುಕೊಳ್ಳದೆ ಮಾತನಾಡಿದ್ದೇನೆ : ಕ್ಷಮೆಯಾಚಿಸಿದ ಪ್ರಜ್ವಲ್ ರೇವಣ್ಣ..!

ಹಾಸನ : ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದಕ್ಕೆ ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಕ್ಷಮೆಯಾಚಿಸಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಅವರು, ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಜೆಡಿಎಸ್​ ಮತ್ತು ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, “ನನ್ನ ಗಮನಕ್ಕೆ ಬಾರದೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದೇನೆ.  ಈ ಸಭೆಯಲ್ಲಿ ಆರ್‌ಎಸ್‌ಎಸ್ ಮುಖಂಡರು, ಕಾರ್ಯಕರ್ತರು ಇದ್ದರೆ ಅವರನ್ನು ಕ್ಷಮಿಸಿ ಅಂತ ಕೇಳುತ್ತೇನೆ. ನಾನೊಬ್ಬ ಯುವಕನಾಗಿ ಹೋರಾಟದ ಮೂಲಕ ಮಾತನಾಡುತ್ತಿದ್ದೆ. ಆದರೆ, ಇವತ್ತು ಅರಿವಾಗಿದೆ, ಹಾಗಾಗಿ ನಿಮ್ಮೆಲ್ಲರ ಕ್ಷಮೆ ಕೇಳುತ್ತೇನೆ ಎಂದರು.

‘ನಾನು ಆಯ್ಕೆಯಾದ ಸಂದರ್ಭದಲ್ಲಿ ನನಗೆ 27 ವರ್ಷ ವಯಸ್ಸು, ಐದು ವರ್ಷ ಸಂಸದನಾಗಿ ಕೆಲಸ ಮಾಡಿದ್ದೇನೆ. ​ಐದು ವರ್ಷ ಮಾಡಿದ ಕೆಲಸ, ಪ್ರಗತಿ ಬಗ್ಗೆ ಯಾರೂ ಪ್ರಶ್ನೆ ಮಾಡಲ್ಲ. ಪ್ರಜ್ವಲ್‌ ರೇವಣ್ಣ ಗೆದ್ದರೆ ಬಿಜೆಪಿ ಕಾರ್ಯಕರ್ತರನ್ನು ತೆಗೆದುಕೊಂಡು ಹೋಗುವ ಕೆಲಸ ಮಾಡ್ತಾನಾ ಎಂಬ ಪ್ರಶ್ನೆ ನಿಮ್ಮಲ್ಲಿದೆ. ನಮ್ಮ ರಾದಾ ಮೋಹನ್ ದಾಸ್ ಅವರು ಹೇಳಿದ್ದಾರೆ. ನಮ್ಮದು ಕಾಂಟ್ರಾಕ್ಟ್ ಮದುವೆ ಅಲ್ಲ, ಐವತ್ತು, ಅರವತ್ತು ವರ್ಷ ಕೊಂಡೊಯ್ಯುವ ಸಂಬಂಧ ಎಂದು.  ಜೆಡಿಎಸ್-ಬಿಜೆಪಿ ಪ್ರತಿಯೊಬ್ಬರನ್ನೂ ಕಾರ್ಯಕರ್ತರನ್ನು ಗೌರವಿಸಿ, ಒಗ್ಗಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತೇನೆ. ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲೆ ಇರಲಿ ಎಂದು ಹೇಳಿದರು.

 

ಇದನ್ನೂ ಓದಿ : ಪೀಣ್ಯ ಎಸಿಪಿ ಕಛೇರಿ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ – ಅರೆಸ್ಟ್ ಆಗ್ತಾರ ಎಸಿಪಿ ರಮೇಶ್?

Leave a Comment

DG Ad

RELATED LATEST NEWS

Top Headlines

ಬಂಧಿತ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥ.. ಕೆಸಿ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್..!

ಬೆಂಗಳೂರು : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸಾಗಾಟ ಮಾಡುತ್ತಿರೋ ಗಂಭೀರ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಮಾಂಸದ ಬಾಕ್ಸ್‌ಗಳನ್ನು ತುಂಬಿರುವ ವಾಹನವನ್ನು ತಡೆದು ನಿನ್ನೆ

Live Cricket

Add Your Heading Text Here