Download Our App

Follow us

Home » ಅಪರಾಧ » ಲೈಂಗಿಕ ದೌರ್ಜನ್ಯ ಕೇಸ್​​​ : ಪ್ರಜ್ವಲ್​ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ..!

ಲೈಂಗಿಕ ದೌರ್ಜನ್ಯ ಕೇಸ್​​​ : ಪ್ರಜ್ವಲ್​ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ..!

ಬೆಂಗಳೂರು : ಲೈಂಗಿಕ ದೌರ್ಜುನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಅತ್ಯಾಚಾರ ಆರೋಪ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಇಂದು ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಜೂನ್​​ 20ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ನ್ಯಾಯಾಲಯದ ವಿಚಾರಣೆ ವೇಳೆ ನ್ಯಾಯಾದೀಶರ ಎದುರು ಪ್ರಜ್ವಲ್​ ರೇವಣ್ಣ ಅಳಲು ತೋಡಿಕೊಂಡಿದ್ದಾರೆ. ನಾನು ಎರಡು ಪ್ರಕರಣದಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿಕೊಂಡಿದ್ದೇನೆ. ಮತ್ತೆ ಅದೇ ಟೆಸ್ಟ್ ಮಾಡಲು ಹೊರಟಿದ್ದಾರೆ. ಇದು ನನಗೆ ಮುಜುಗರ ಆಗುತ್ತೆ ಎಂದಿದ್ದಾರೆ. ಆದರೆ ಪ್ರಜ್ವಲ್​​​ ಹೇಳಿಕೆಗೆ ಎಸ್​ಐಟಿ ಪರ ವಕೀಲರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ನಟ ದರ್ಶನ್​ಗೆ ಮತ್ತೊಂದು ಕಂಟಕ : ರೀ ಓಪನ್ ಆಗುತ್ತಾ ಮ್ಯಾನೇಜರ್ ಸ್ಯೂಸೈಡ್ ಕೇಸ್?

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here