Download Our App

Follow us

Home » ಅಪರಾಧ » ಪ್ರಜ್ವಲ್​​ ರೇವಣ್ಣ ಎಸ್​ಐಟಿ ಕಸ್ಟಡಿ ಇಂದು ಅಂತ್ಯ – ಮಾಜಿ ಸಂಸದ ಜೈಲಿಗಾ? ಮತ್ತೆ SIT ಕಸ್ಟಡಿಗಾ?

ಪ್ರಜ್ವಲ್​​ ರೇವಣ್ಣ ಎಸ್​ಐಟಿ ಕಸ್ಟಡಿ ಇಂದು ಅಂತ್ಯ – ಮಾಜಿ ಸಂಸದ ಜೈಲಿಗಾ? ಮತ್ತೆ SIT ಕಸ್ಟಡಿಗಾ?

ಬೆಂಗಳೂರು : ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಪ್ರಜ್ವಲ್​​ ರೇವಣ್ಣಗೆ ನಗರದ ಬೌರಿಂಗ್​ ಆಸ್ಪತ್ರೆಯಲ್ಲಿ ಪುರುಷತ್ವ ಪರೀಕ್ಷೆ ನಡೆಸಲಾಗಿದೆ. ನ್ಯಾಯಾಲಯದ ಅನುಮತಿ ಪಡೆದ ಎಸ್‌ಐಟಿ ಅಧಿಕಾರಿಗಳು ನಿನ್ನೆ ಬೆಳಗ್ಗೆ 11 ಗಂಟೆಗೆ ಬೌರಿಂಗ್​ ಆಸ್ಪತ್ರೆಗೆ ಕರೆದೊಯ್ದಿದ್ದರು.

ಬೌರಿಂಗ್ ಆಸ್ಪತ್ರೆ ಆವರಣದಲ್ಲಿರುವ ಅಟಲ್ ಬಿಹಾರಿ ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಪ್ರಜ್ವಲ್​ಗೆ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಪರೀಕ್ಷೆ ನಡೆದಿದೆ. ವೀರ್ಯ ಮತ್ತು ರಕ್ತ ಮಾದರಿ ಸಂಗ್ರಹ ಮತ್ತು ಲೈಂಗಿಕ ಕ್ರಿಯೆ ನಡೆಸಲು ಸಾಮರ್ಥ್ಯ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಈ ಪರೀಕ್ಷೆಯನ್ನು ನಡೆಸಲಾಗಿದೆ. ಇನ್ನೊಂದು ವಾರದಲ್ಲಿ ವರದಿ ಎಸ್‌ಐಟಿ ಕೈ ಸೇರಲಿದೆ ಎಂದು ಕೆಲ ಮೂಲಗಳಿಂದ ತಿಳಿದು ಬಂದಿದೆ.

ಮತ್ತೆ ಇಂದು ಕೋರ್ಟ್​ಗೆ ಹಾಜರ್ : ಪ್ರಜ್ವಲ್ ರೇವಣ್ಣ ವಿದೇಶದಿಂದ ಆಗಮಿಸುತ್ತಿದ್ದಂತೆ ಮೇ31 ರಂದು ಕೆಂಪೇಗೌಡ ವಿಮಾನ ನಿಲ್ದಾಣದಲ್ಲೇ ಎಸ್​ಐಟಿ ಪೊಲೀಸರು ಬಂಧಿಸಿದ್ದರು. ಬಳಿಕ ಕೋರ್ಟ್​ಗೆ ಹಾಜರುಪಡಿಸಿ, ಜೂನ್ 6ರವರೆಗೆ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದರು. ಇಂದು ಕಸ್ಟಡಿ ಅಂತ್ಯವಾಗುವ ಹಿನ್ನೆಲೆಯಲ್ಲಿ ಎಸ್​ಐಟಿ ಅಧಿಕಾರಿಗಳು ಕೋರ್ಟ್​ ಮುಂದೆ ಮತ್ತೆ ಪ್ರಜ್ವಲ್ ರೇವಣ್ಣ ಅವರನ್ನು ಹಾಜರುಪಡಿಸಲಿದ್ದಾರೆ.

ತನಿಖೆಗೆ ಪ್ರಜ್ವಲ್ ಸಹಕಾರ ನೀಡಿಲ್ಲ, ಅನಾರೋಗ್ಯ ನೆಪ ಹೇಳ್ತಿದ್ದಾರೆ. ಪ್ರಕರಣ ಸಂಬಂಧ ಮತ್ತಷ್ಟು ಮಾಹಿತಿ ಕಲೆ ಹಾಕಬೇಕಿದೆ. ಹೆಚ್ಚಿನ ತನಿಖೆಗಾಗಿ ಮತ್ತೆ 5 ದಿನ ಪ್ರಜ್ವಲ್​ನನ್ನು ಕಸ್ಟಡಿಗೆ ನೀಡುವಂತೆ ಎಸ್​ಐಟಿ ಅಧಿಕಾರಿಗಳು ಕೋರ್ಟ್​ಗೆ ಮನವಿ ಮಾಡಲು ತೀರ್ಮಾನಿಸಿದ್ದಾರೆ. ಕೋರ್ಟ್ ಮುಂದೆ ಪ್ರಕರಣ ಸಂಬಂಧ ವಾದ-ಪ್ರತಿವಾದ ನಡೆಯಲಿದೆ. ಒಂದ್ವೇಳೆ SIT ಕಸ್ಟಡಿಗೆ ನೀಡದೇ ಇದ್ರೆ ಪ್ರಜ್ವಲ್​​ ಪರಪ್ಪನ ಅಗ್ರಹಾರ ಜೈಲಿಗೆ ಹೋಗೋದು ಖಚಿತ ಎನ್ನಲಾಗಿದೆ.

ಹೊಳೆನರಸೀಪುರ ಪೊಲೀಸ್ ಠಾಣೆ ಮತ್ತು ಸಿಐಡಿ ಠಾಣೆಗಳಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಎಸ್​ಐಟಿ ರಚಿಸಿ, ತನಿಖೆಗೆ ಆದೇಶಿಸಿತ್ತು. ಇನ್ನು ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿ ಬಂದ ಬಳಿಕ ಪ್ರಜ್ವಲ್ ವಿದೇಶಕ್ಕೆ ತೆರಳಿದ್ದರು. ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನಟರ್ ನೋಟಿಸ್, ಬಂಧನ ವಾರಂಟ್ ಕೂಡ ಹೊರಡಿಸಲಾಗಿತ್ತು. ಕೊನೆಗೆ 35 ದಿನಗಳ ಬಳಿಕ ಪ್ರಜ್ವಲ್ ಬೆಂಗಳೂರಿಗೆ ಆಗಮಿಸಿದ್ದರು.

ಇದನ್ನೂ ಓದಿ : ಇಂದೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಸಾಧ್ಯತೆ – ಸಿಎಂ ಸಿದ್ದರಾಮಯ್ಯ ಕೊಟ್ಟ ಸೂಚನೆಯೇನು?

 

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here