Download Our App

Follow us

Home » ಅಪರಾಧ » ಇಂದು ಪ್ರಜ್ವಲ್‌ ರೇವಣ್ಣ SIT ಕಸ್ಟಡಿ ಅಂತ್ಯ – ಕೋರ್ಟ್‌ ಮುಂದೆ ಹಾಜರು..!

ಇಂದು ಪ್ರಜ್ವಲ್‌ ರೇವಣ್ಣ SIT ಕಸ್ಟಡಿ ಅಂತ್ಯ – ಕೋರ್ಟ್‌ ಮುಂದೆ ಹಾಜರು..!

ಬೆಂಗಳೂರು : ಅಶ್ಲೀಲ ವಿಡಿಯೋ, ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಆರೋಪದಲ್ಲಿ ಅರೆಸ್ಟ್ ಆಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಕಸ್ಟಡಿ ಇಂದಿಗೆ ಅಂತ್ಯ ಆಗಲಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

ಎರಡೆರಡು ಬಾರಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದರೂ ಪೊಲೀಸರಿಗೆ ತಲೆ ಬಿಸಿ ತಪ್ಪಿಲ್ಲ. ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರಬಲ ಸಾಕ್ಷಿಗಳ ಸಂಗ್ರಹಕ್ಕೆ ಎಸ್‌ಐಟಿ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಈವರೆಗೆ ಆರೋಪಿ ವಿರುದ್ಧದ ಎರಡು ಪ್ರಕರಣಗಳ ತನಿಖೆಯನ್ನು ಅಧಿಕಾರಿಗಳು ಮುಗಿಸಿದ್ದಾರೆ. ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ಹಾಗೂ ಸಿಐಡಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದೆ. ಎಸ್ಐಟಿ ತನಿಖೆ ಮುಗಿದ ಹಿನ್ನೆಲೆ ಇಂದು ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಗುವುದು. ಸಿಐಡಿಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣ‌ ಮತ್ತೆ ಕಸ್ಟಡಿಗೆ ಪಡೆಯಲು ಎಸ್ಐಟಿ ತಯಾರಿ ನಡೆಸಿದೆ. ಕಸ್ಟಡಿಗೆ ಪಡೆಯಲು ಕೋರ್ಟ್‌ಗೆ ಎಸ್‌ಐಟಿ ಮನವಿ ಮಾಡಲಿದೆ. ಬಾಡಿ ವಾರೆಂಟ್ ಮೇಲೆ ಮತ್ತೆ ಪ್ರಜ್ವಲ್ ರೇವಣ್ಣರನ್ನು ಕಸ್ಟಡಿಗೆ ಪಡೆಯಲು ಎಸ್‌ಐಟಿ ಮುಂದಾಗಿದೆ.

Leave a Comment

DG Ad

RELATED LATEST NEWS

Top Headlines

ಸಿಎಂ ಸಿದ್ದರಾಮಯ್ಯಗೆ ಸದ್ಯಕ್ಕಿಲ್ಲ CBI ಸಂಕಷ್ಟ – ಮುಡಾ ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್​!

ಧಾರವಾಡ : ಇಂದು ಧಾರವಾಡ ಹೈಕೋರ್ಟ್​ನಲ್ಲಿ ಮುಡಾ ಕೇಸ್ ತನಿಖೆ ಸಿಬಿಐಗೆ ನೀಡುವಂತೆ ಕೋರಿ​ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆದಿದ್ದು, ವಾದ-ಪ್ರತಿವಾದ ಆಲಿಸಿದ  ಧಾರವಾಡ ಹೈಕೋರ್ಟ್​

Live Cricket

Add Your Heading Text Here