ಇದೇ ಜುಲೈ 27ರಂದು ಸ್ಯಾಂಡಲ್ವುಡ್ನ ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಆ ಸಲುವಾಗಿ ಪ್ರಕೃತಿ ಪ್ರೊಡಕ್ಷನ್ಸ್ ಸಂಸ್ಥೆಯು ಉಮಾಪತಿ ಶ್ರೀನಿವಾಸ್ ಅವರಿಗೆ ಸ್ಪೆಷಲ್ ಗಿಫ್ಟ್ ನೀಡಿದ್ದು, “ದ ಕಫ್ತಾನ್” ಎಂಬ ಆಲ್ಬಂ ಸಾಂಗ್ ರಿಲೀಸ್ ಮಾಡಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.
ಶರಣಪ್ಪ ಗೌರಮ್ಮ ಅವರು ಈ ಹಾಡಿನ ನಿರ್ಮಾಪಕರು. ಕಿಕ್ ಬಾಕ್ಸಿಂಗ್‌ನಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಶರಣಪ್ಪ ಗೌರಮ್ಮ ‘ಯಾವ ಮೋಹನ ಮುರಳಿ ಕರೆಯಿತು’ ಚಿತ್ರದ ಮೂಲಕ ನಿರ್ಮಾಪಕರಾಗಿ ಕನ್ನಡ ಚಿತ್ರರಂಗ ಪ್ರವೇಶ ಮಾಡಿದ್ದಾರೆ. ಈಗ ಉಮಾಪತಿ ಅವರಿಗೆ ಈ ಸಾಂಗ್ ಮಾಡಿ ಉಮಾಪತಿ ಅವರ ಹುಟ್ಟುಹಬ್ಬಕ್ಕೆ ಸ್ಪೆಷಲ್ ಗಿಫ್ಟ್ ನೀಡಿದ್ದಾರೆ.
ಉಮಾಪತಿ ಶ್ರೀನಿವಾಸ್ ಗೌಡ ಹುಟ್ಟುಹಬ್ಬಕ್ಕಾಗಿ ತಯಾರಾಗಿರುವ ಈ ಹಾಡನ್ನು ಜುಲೈ 23ರಂದು ರಿಲೀಸ್ ಮಾಡಿ, ಅಡ್ವಾನ್ಸ್ ಆಗಿ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಲಾಗಿದೆ. ಪದ್ದಿ ಮಲ್ನಾಡ್ ಅವರು ಈ ಹಾಡನ್ನು ಬರೆದಿದ್ದು, ಅನಿಲ್ ಸಿ.ಜೆ ಹಾಡುವುದರ ಜೊತೆಗೆ ಸಂಗೀತ ನಿರ್ದೇಶನವನ್ನು ಕೂಡ ಮಾಡಿದ್ದಾರೆ. “ದ ಕಫ್ತಾನ್” ಆಲ್ಬಂ ಸಾಂಗ್ ಮಾಸ್ ಮ್ಯೂಸಿಕ್ ಅಡ್ಡ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ.
“ಉಮಾಪತಿ ಶ್ರೀನಿವಾಸ್ ಗೌಡ ಅವರ ಮೇಲೆ ನನಗೆ ಅಪಾರ ಪ್ರೀತಿ ಹಾಗೂ ಗೌರವ. ನಮ್ಮ ಎಲ್ಲಾ ಕೆಲಸಗಳಿಗೂ ಅವರ ಪ್ರೋತ್ಸಾಹ ಇರುತ್ತದೆ. ಹಾಗಾಗಿ ಈ ಹಾಡನ್ನು ಬಿಡುಗಡೆ ಮಾಡುವ ಮೂಲಕ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಮುಂಚಿತವಾಗಿಯೇ ತಿಳಿಸುತ್ತಿದ್ದೇವೆ” ಎಂದು ನಿರ್ಮಾಪಕ ಶರಣಪ್ಪ ಗೌರಮ್ಮ ತಿಳಿಸಿದ್ದಾರೆ.
ಇದನ್ನೂ ಓದಿ : ಏಷ್ಯಾಕಪ್ನಲ್ಲಿ ಹ್ಯಾಟ್ರಿಕ್ ಗೆಲುವಿನೊಂದಿಗೆ ಸೆಮಿಫೈನಲ್ ಪ್ರವೇಶಿಸಿದ ಭಾರತ..!