Download Our App

Follow us

Home » ಸಿನಿಮಾ » ಕಂಠೀರವ ಸ್ಟುಡಿಯೋದಲ್ಲಿ ‘ಸಂಜು ವೆಡ್ಸ್ ಗೀತಾ-2’ ಚಿತ್ರದ ಪ್ರೀ ಕ್ಲೈಮ್ಯಾಕ್ಸ್ ಶೂಟಿಂಗ್..!

ಕಂಠೀರವ ಸ್ಟುಡಿಯೋದಲ್ಲಿ ‘ಸಂಜು ವೆಡ್ಸ್ ಗೀತಾ-2’ ಚಿತ್ರದ ಪ್ರೀ ಕ್ಲೈಮ್ಯಾಕ್ಸ್ ಶೂಟಿಂಗ್..!

ನಾಗಶೇಖರ್ ನಿರ್ದೇಶಿಸುತ್ತಿರುವ “ಸಂಜು ವೆಡ್ಸ್ ಗೀತಾ-2” ಚಿತ್ರ ಆರಂಭದಿಂದಲೂ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಜೊತೆ ರಮ್ಯಾ ಬದಲು ರಚಿತಾರಾಮ್ ಎಂಟ್ರಿಯಾಗಿದ್ದಾರೆ. ಸಂಜು ಹಾಗೂ ಗೀತಾರ ನವೀನ ಪ್ರೇಮಕಥೆಯನ್ನು ರೇಷ್ಮೆ ಬೆಳೆಯುವ ರೈತರ ಹೋರಾಟದ ಹಿನ್ನೆಲೆ ಇಟ್ಟುಕೊಂಡು ನಾಗಶೇಖರ್ ಹೇಳಹೊರಟಿದ್ದಾರೆ. ಈ ಚಿತ್ರದ ಪ್ರೀ ಕ್ಲೈಮ್ಯಾಕ್ಸ್ ದೃಶ್ಯದ ಚಿತ್ರೀಕರಣ ನಿನ್ನೆ ಕಂಠೀರವ ಸ್ಟುಡಿಯೋದಲ್ಲಿ ನಡೆದಿತ್ತು.

ಅಲ್ಲಿ ನಾಯಕ ಶ್ರೀನಗರ ಕಿಟ್ಟಿ ಒಬ್ಬ ಸೈನಿಕನ ಗೆಟಪ್ ನಲ್ಲಿದ್ದರು. ಜರ್ಮನ್ ಸೈನಿಕರ ವಿರುದ್ದ ಸೆಣೆಸಾಟ ನಡೆಸಿ ಅವರ ಹಿಡಿತದಿಂದ ರಾಣಿಯನ್ನು ಬಿಡಿಸಿಕೊಂಡು ಬರುವ ಸನ್ನಿವೇಶವದು. ಆ ದೃಶ್ಯವನ್ನು ಗ್ರೀನ್ ಮ್ಯಾಟ್ ನಲ್ಲಿ ಚಿತ್ರೀಕರಿಸಲಾಗುತ್ತಿತ್ತು. ರೇಷ್ಮೆ ನೂಲಿಗೆ ಉತ್ತಮ ಬೆಲೆ ಸಿಗಬೇಕೆಂದು ಹೋರಾಡುವ ನಮ್ಮ ಮಣ್ಣಿನ ಪ್ರೇಮಿಗಳ ಪ್ರೇಮಕಾವ್ಯವನ್ನು ನಾಗಶೇಖರ್ ಈ ಚಿತ್ರದಲ್ಲಿ ಹೇಳಹೊರಟಿದ್ದಾರೆ. ನಟಿ ರಾಗಿಣಿ ಜೋಡಿಯಾಗಿ ಕಾಣಿಸಿಕೊಳ್ಳುತ್ತಿರುವ ನಟ ಚೇತನ್ ಚಂದ್ರ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

ಈ ಸಂದರ್ಭದಲ್ಲಿ ನಾಗಶೇಖರ್ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಇದು ಚಿತ್ರದ ಪ್ರಿ ಕ್ಲೈಮ್ಯಾಕ್ಸ್ ಸೀನ್. ಇದರ ನಂತರ ನೆದರ್ ಲ್ಯಾಂಡ್ನಲ್ಲಿ ಚಿತ್ರೀಕರಣ ಮುಂದುವರಿಯುತ್ತದೆ. ನಿರ್ಮಾಪಕ ಕುಮಾರ್ ಅವರ ಸಹಕಾರದಿಂದ ಚಿತ್ರದ ಚಿತ್ರೀಕರಣ ಅಂದುಕೊಂಡ ಪ್ಲಾನ್ ಪ್ರಕಾರ ಸರಾಗವಾಗಿ ಮುಗಿಯುತ್ತಿದೆ. ಹನ್ನೆರಡು ಕೋಟಿ ಅಂದುಕೊಂಡ ಬಜೆಟ್ ಈಗ ಹದಿನೈದು ಕೋಟಿಯಾಗಿದೆ. ಶೂಟಿಂಗ್ ಜೊತೆಗೇ ಎಡಿಟಿಂಗ್ ಸೇರಿದಂತೆ ಚಿತ್ರದ ಪೋಸ್ಟ ಪ್ರೊಡಕ್ಷನ್ ಕೆಲಸಗಳು ಬಹುತೇಕ ಮುಗಿದಿವೆ‌. ಅಂದುಕೊಂಡ ಹಾಗೆ ದಸರಾ ವೇಳೆಗೆ ಚಿತ್ರವನ್ನು ತೆರೆಗೆ ತರಲು ಪ್ರಯತ್ನ ಮಾಡುತ್ತಿದ್ದೇವೆ. ಈಗಾಗಲೇ ಸ್ವಿಟ್ಜರ್ ಲ್ಯಾಂಡ್ ನಲ್ಲಿ 15 ದಿನ ಹನ್ನೊಂದು ಲೊಕೇಶನ್ ಗಳಲ್ಲಿ ಚಿತ್ರೀಕರಣ ಮಾಡಿದ್ದೇವೆ. ಈಗ ನೆದರ್ ಲ್ಯಾಂಡ್ ಗೆ ಹೋಗ್ತಿದ್ದೇವೆ ಎಂದು ಹೇಳಿದರು.

ನಂತರ ನಿರ್ಮಾಪಕ ಛಲವಾದಿ ಕುಮಾರ್ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈಗಾಗಲೇ ನಾವು ಶೂಟಿಂಗ್ ಕೊನೇ ಹಂತಕ್ಕೆ ಬಂದಿದ್ದೇವೆ. ಅಂದುಕೊಂಡ ಹಾಗೆ ಚಿತ್ರ ಮೂಡಿಬರುತ್ತಿದೆ. ಒಂದು ಅದ್ಭುತ ದೃಶ್ಯಕಾವ್ಯವಾಗಿ ಸಂಜು ವೆಡ್ಸ್ ಗೀತಾ ಚಿತ್ರ ಮೂಡಿಬರಬೇಕು ಎನ್ನುವುದೇ ನಮ್ಮ ಉದ್ದೇಶ ಎಂದು ಹೇಳಿದರು.

ಪವಿತರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ನಿರ್ಮಾಪಕ ಛಲವಾದಿ ಕುಮಾರ್ ಅವರು ಈ ಚಿತ್ರವನ್ನು ಅದ್ದೂರಿ ಬಜೆಟ್ ನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ನಾಗಶೇಖರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಸಂಗೀತ ನಿರ್ದೇಶಕ‌ ಶ್ರೀಧರ ವಿ. ಸಂಭ್ರಮ 5 ಸುಂದರವಾದ ಹಾಡುಗಳನ್ನು ಮಾಡಿದ್ದು, ಸೋನು ನಿಗಂ, ಶ್ರೇಯಾ ಘೋಷಾಲ್, ಮಂಗ್ಲಿ ದನಿಯಾಗಿದ್ದಾರೆ. ರಾಗಿಣಿ ದ್ವಿವೇದಿ, ಚೇತನ್ ಚಂದ್ರ, ರಂಗಾಯಣ ರಘು, ಸಾಧು ಕೋಕಿಲ , ತಬಲಾನಾಣಿ, ಗಿಚ್ಚಿಗಿಲಿಗಿಲಿ ವಿನೋದ್ ಅಲ್ಲದೆ ಖಳನಟ ಸಂಪತ್ ಕುಮಾರ್ ಸೇರಿದಂತೆ ಹೆಸರಾಂತ ಕಲಾವಿದರ ತಾರಾಗಣ ಈ ಚಿತ್ರಕ್ಕಿದೆ. A 24 ಕ್ರಿಯೇಶನ್ಸ್ ಥ್ರೂ ಗೋಕುಲ್ ಫಿಲಂಸ್ ಈ ಚಿತ್ರವನ್ನು ಪ್ರಪಂಚದಾದ್ಯಂತ ಬಿಡುಗಡೆ ಮಾಡುತ್ತಿದೆ.

ಇದನ್ನೂ ಓದಿ : ಮಡಿಕೇರಿ : ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ – ಕೋವಿಯೊಂದಿಗೆ ಠಾಣೆಗೆ ಬಂದು ಶರಣಾದ ಪತಿ..!

Leave a Comment

DG Ad

RELATED LATEST NEWS

Top Headlines

ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ಪ್ರಶ್ನೆ ಇಲ್ಲವೇ ಇಲ್ಲ – ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ..!

ಬೆಂಗಳೂರು : ರಾಜ್ಯದಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅನುಕೂಲ ಮಾಡಿಕೊಟ್ಟಿರುವ ರಾಜ್ಯ ಸರ್ಕಾರದ ಶಕ್ತಿ ಯೋಜನೆ ಸ್ಥಗಿತವಾಗುತ್ತದೆಯೇ ಎಂಬ ಸುದ್ದಿಗಳು ಹರಿದಾಡುತ್ತಿವೆ, ಇದರ ಬೆನ್ನಲ್ಲಿಯೇ ಸಿಎಂ ಸಿದ್ದರಾಮಯ್ಯ

Live Cricket

Add Your Heading Text Here