ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ಇಂದು ಶಿಕ್ಷಣ ಇಲಾಖೆ ವಿರುದ್ಧ ಬೃಹತ್ ಪ್ರತಿಭಟನೆಗೆ ನಡೆಸುತ್ತಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ರಾಜ್ಯದ ವಿವಿಧೆಡೆಯಿಂದ ಶಾಲಾ ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.
2017ರ ವೃಂದ ಮತ್ತು ನೇಮಕಾತಿ ನಿಯಮಗಳು ಅದಕ್ಕಿಂತಲೂ ಮುಂಚೆ ನೇಮಕಾತಿಗೊಂಡಿರುವ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಕಾರ್ಯಾದೇಶ ಹೊರಡಿಸಿದೆ. ಅಲ್ಲದೆ ಮೂಲತಃ 1 ರಿಂದ 7 ಹಾಗೂ 8 ಕ್ಕೆ ನೇಮಕ ಹೊಂದಿದ ಶಿಕ್ಷಕರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ 1 ರಿಂದ 5 ಕ್ಕೆ ಹಿಂಬಡ್ತಿ ನೀಡಿದೆ. ಸರ್ಕಾರದ ಈ ಆದೇಶದಿಂದ ಸುಮಾರು 1.20 ಲಕ್ಷ ಶಿಕ್ಷಕರಿಗೆ ಅನ್ಯಾಯವಾಗಿದೆ.
ಹಾಗಾಗಿ ಕೂಡಲೇ ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕು. 2016 ಕ್ಕಿಂತ ಮುಂಚೆ ನೇಮಕ ಹೊಂದಿದ ಶಿಕ್ಷಕರನ್ನು ಎನ್‌ಸಿಟಿ ನಿಯಮಾವಳಿ ಪ್ರಕಾರ ಪದವಿ ವಿದ್ಯಾರ್ಹತೆ ಹೊಂದಿದ ಎಲ್ಲ ಸೇವಾನಿರತ ಶಿಕ್ಷಕರನ್ನು ಜಿಪಿಟಿ ಶಿಕ್ಷಕರೆಂದು ಸೇವಾ ಜೇಷ್ಠತೆಯೊಂದಿಗೆ ಪುನರ್ ಪದನಾಮಕರಣ ಮಾಡಬೇಕು ಎಂಬ ಬೇಡಿಕೆಯನ್ನು ಶಿಕ್ಷಕರು ಸರ್ಕಾರದ ಮುಂದಿಟ್ಟಿದ್ದಾರೆ.
ಇನ್ನು ಸರ್ಕಾರಿ ಶಿಕ್ಷಕರ ಪ್ರತಿಭಟನೆಗೆ ಖಾಸಗಿ ಶಾಲಾ ಒಕ್ಕೂಟ ಕೂಡ ಬೆಂಬಲ ಸೂಚಿಸಿದೆ. ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿರುವ ಖಾಸಗಿ ಶಾಲಾ ಒಕ್ಕೂಟ, ಶಿಕ್ಷಕರ ಕಷ್ಟ ಅರಿತೂ ಇಲಾಖೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಒತ್ತಾಯಿಸಲಿದ್ದಾರೆ.
ಇದನ್ನೂ ಓದಿ : ತಾಯಿ ಜೊತೆ ಹೋಟೆಲ್ಗೆ ಬಂದಿದ್ದ ರೌಡಿಶೀಟರ್.. ಊಟ ಮುಗಿಸಿ ಹೊರ ಬರ್ತಿದ್ದಂತೆ ಅಟ್ಟಾಡಿಸಿ ಕೊಂದ ಗ್ಯಾಂಗ್..!