ಬೆಂಗಳೂರು : ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತದಿಂದ 8ಜನ ಮೃತಪಟ್ಟಿದ್ದಾರೆ. ಇದೀಗ ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಿಸಿದ್ದಾರೆ.
ತಲಾ ಒಬ್ಬರಿಗೆ 2 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದು, ಗಾಯಾಳುಗಳ ಕುಟುಂಬಕ್ಕೆ 50 ಸಾವಿರ ಪರಿಹಾರ ನೀಡಲಿದ್ದಾರೆ.
ಹೆಣ್ಣೂರು ಸಮೀಪ ಕುಸಿದಿರುವ 6 ಅಂತಸ್ತಿನ ಕಟ್ಟಡ ದುರಂತಕ್ಕೆ ಪ್ರಧಾನಿ ಮೋದಿ ತೀವ್ರ ಆಘಾತ ವ್ಯಕ್ತಪಡಿಸಿ, PMNRF ನಿಧಿ ಅಡಿಯಲ್ಲಿ ಪರಿಹಾರ ಘೋಷಣೆ ಮಾಡಿದ್ದಾರೆ. 26 ವರ್ಷದ ಹರ್ಮಾನ್, 35 ವರ್ಷದ ತ್ರಿಪಾಲ್, 19 ವರ್ಷದ ಮೊಹ್ಮದ್ ಸಾಹಿಲ್, 25 ವರ್ಷದ ಸತ್ಯರಾಜು, ಶಂಕರ್ ಎಂಬುವರು ಸಾವನ್ನಪ್ಪಿದ್ದರು. ಇನ್ನು 13ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಇದರಲ್ಲಿ ಹಲವರು ಆಸ್ಪತ್ರೆಗೆ ಸೇರಿ ಟ್ರೀಟ್ಮೆಂಟ್ ಪಡೆಯುತ್ತಿದ್ದಾರೆ.
ಮಂಗಳವಾರ ನಗರದಲ್ಲಿ ಸುರಿದ ಭಾರೀ ಮಳೆಯ ನಡುವೆಯೇ ಈ ಕಟ್ಟಡ ಕುಸಿತ ಸಂಭವಿಸಿತ್ತು. ದುರಂತ ನಡೆದ ಸಂದರ್ಭದಲ್ಲಿ ಬಿಹಾರ, ಆಂಧ್ರಪ್ರದೇಶದ ಚಿತ್ತೂರು ಮತ್ತು ಕರ್ನಾಟಕದ ಯಾದಗಿರಿಯ ಒಟ್ಟು 21 ಕಾರ್ಮಿಕರು ಇದ್ದರು ಎನ್ನಲಾಗಿದೆ. ಅವಶೇಷಗಳಡಿಯಲ್ಲಿ ಸಿಕ್ಕಿಬಿದ್ದಿರುವ ಕಾರ್ಮಿಕರನ್ನು ರಕ್ಷಿಸಲು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಪೊಲೀಸ್ ಮತ್ತು ಅಗ್ನಿಶಾಮಕ ತುರ್ತು ಸೇವಾ ಸಿಬ್ಬಂದಿಗಳು ನಿರಂತರ ಕಾರ್ಯಾಚರಣೆ ನಡೆಸಿದ್ದಾರೆ.
ಇದನ್ನೂ ಓದಿ : ಪ್ರಿಯಾಂಕಾ ಗಾಂಧಿ 12 ಕೋಟಿ ಮೌಲ್ಯದ ಆಸ್ತಿ ಒಡತಿ – ಪತಿ ರಾಬರ್ಟ್ ವಾದ್ರಾ ಸಂಪತ್ತು ಎಷ್ಟು ಗೊತ್ತಾ?