Download Our App

Follow us

Home » ರಾಷ್ಟ್ರೀಯ » ಮಹಿಳಾ ದಿನಕ್ಕೆ ಬಿಗ್​ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ : LPG ಸಿಲಿಂಡರ್​ ಬೆಲೆ 100 ರೂ. ಇಳಿಕೆ..!

ಮಹಿಳಾ ದಿನಕ್ಕೆ ಬಿಗ್​ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ : LPG ಸಿಲಿಂಡರ್​ ಬೆಲೆ 100 ರೂ. ಇಳಿಕೆ..!

ನವದೆಹಲಿ : ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ ಪ್ರಧಾನಿ ಮೋದಿ ಬಿಗ್​ ಗಿಫ್ಟ್​ ಕೊಟ್ಟಿದ್ದಾರೆ. ಮೋದಿ LPG ಸಿಲಿಂಡರ್ ಬೆಲೆ 100 ರೂ. ಇಳಿಕೆ ಮಾಡಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​-Xನಲ್ಲಿ ಪೋಸ್ಟ್ ಮಾಡಿ ತಿಳಿಸಿದ್ದಾರೆ.

ಇಂದು  ಮಹಿಳಾ ದಿನ. ನಮ್ಮ ಸರ್ಕಾರವು LPG ಸಿಲಿಂಡರ್‌ ಬೆಲೆಯನ್ನು 100 ರೂ. ಇಳಿಕೆ ಮಾಡಿದೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡಲಿದೆ.

ಅಡುಗೆ ಅನಿಲವನ್ನು ಹೆಚ್ಚು ಕೈಗೆಟಕುವಂತೆ ಮಾಡುವ ಮೂಲಕ ನಾವು ಕುಟುಂಬಗಳ ಯೋಗಕ್ಷೇಮ ಮತ್ತು ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ. ಮಹಿಳೆಯರ ಸಬಲೀಕರಣ ಹಾಗೂ ಹೆಣ್ಣುಮಕ್ಕಳು ಸುಲಭವಾಗಿ ಜೀವನ ಸಾಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಪ್ರಯತ್ನವಾಗಿದೆ ಎಂದು ಬರೆದಿದ್ದಾರೆ.

ಅಡುಗೆ ಅನಿಲದ ದರ ಇಳಿಕೆ ನನ್ನ ತಾಯಂದಿರಿಗೆ ಕೊಡುಗೆ, ಕೋಟಿ-ಕೋಟಿ ಬಡ ಕುಟುಂಬಗಳ ಆರ್ಥಿಕ ಹೊರೆ ತಗ್ಗಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಮಹಿಳಾ ಸ್ವಾವಲಂಬನೆಗೆ ಮತ್ತಷ್ಟು ಹೆಜ್ಜೆ ಇಡಲಿದ್ದೇವೆ ಎಂದು ಪೋಸ್ಟ್​ ಮಾಡಿದ್ದಾರೆ. ನಿನ್ನೆಯಷ್ಟೇ ಸರ್ಕಾರ ಉಜ್ವಲ ಗ್ರಾಹಕರಿಗೆ 300 ರೂಪಾಯಿ ಗ್ಯಾಸ್​ ಸಬ್ಸಿಡಿ ಮುಂದುವರೆಸಿತ್ತು. ಇಂದು ಸಿಲಿಂಡರ್​ಗೆ ಬೆಲೆ 100 ರೂ.ಇಳಿಕೆ ಮಾಡುವ ಮೂಲಕ ಪ್ರಧಾನಿ ಮೋದಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಇದನ್ನೂ ಓದಿ : ಬಾಂಬ್​ ಸಿಡಿದ ರಾಮೇಶ್ವರಂ ಕೆಫೆ ಒಂದು ವಾರದ ಬಳಿಕ ರೀ ಓಪನ್..!

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ

Live Cricket

Add Your Heading Text Here