Download Our App

Follow us

Home » ಕ್ರೀಡೆ » ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಶುಭಕೋರಿದ ಪ್ರಧಾನಿ ಮೋದಿ..!

ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಶುಭಕೋರಿದ ಪ್ರಧಾನಿ ಮೋದಿ..!

ನವದೆಹಲಿ : ಭಾರತ ತಂಡ ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಳ್ಳುತ್ತಿದ್ದಂತೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಬ್ರಿಡ್ಜ್‌ಟೌನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ಕೊನೆಯ ನಾಲ್ಕು ಓವರ್ ಗಳು ತೀವ್ರ ಜಿದ್ದಾಜಿದ್ದಿನಿಂದ ಕೂಡಿತ್ತು. ಅಂತಿಮವಾಗಿ ಭಾರತ 7 ರನ್ ಗಳಿಂದ ದಕ್ಷಿಣ ಆಫ್ರಿಕಾವನ್ನು ಮಣಿಸಿ ಟ್ರೋಫಿಯನ್ನು ಎತ್ತಿಹಿಡಿದಿದೆ. ಇದು ಭಾರತಾಂಬೆಯ ಮಡಿಲಿಗೆ ಸೇರಿದ ಎರಡನೇ ಟಿ20 ವಿಶ್ವಕಪ್ ಟ್ರೋಫಿ ಆಗಿದೆ.

2007ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಮೊದಲ ಟಿ20 ವಿಶ್ವಕಪ್ ಟ್ರೋಫಿ ಗೆದ್ದಿತ್ತು. ಬರೋಬ್ಬರಿ 17 ವರ್ಷದ ಬಳಿಕ ಮತ್ತೆ ಟೀಂ ಇಂಡಿಯಾ ಗೆದ್ದು ಬೀಗಿದೆ. ಇನ್ನು ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಂಡದ ಆಟಗಾರರಿಗೆ ಶುಭಾಶಯ ತಿಳಿಸಿದ್ದಾರೆ. T-20 ವಿಶ್ವಕಪ್​​ ಗೆದ್ದ ಟೀಂ ಇಂಡಿಯಾಗೆ ಚಾಂಪಿಯನ್ಸ್​​ ಎಂದು ಪ್ರಧಾನಿ ಮೋದಿ ಹೊಗಳಿದ್ದಾರೆ. ​

ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋವನ್ನು ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ತಂಡವು ಟಿ20 ವಿಶ್ವಕಪ್ ಅನ್ನು ಮನೆಗೆ ತಂದಿರುವುದು ನಮಗೆ ಹೆಮ್ಮೆ ತಂದಿದೆ ಎಂದು ಹೇಳಿದ್ದಾರೆ. ಈ ಗೆಲುವು ಪ್ರತಿಯೊಬ್ಬ ಭಾರತೀಯನ ದೊಡ್ಡ ವಿಜಯವಾಗಿದೆ. ಭಾರತೀಯ ಆಟಗಾರರು ವಿಶ್ವಕಪ್ ಟ್ರೋಫಿ ಜೊತೆಗೆ ಕೋಟ್ಯಾಂತರ ಭಾರತೀಯರ ಹೃದಯವನ್ನೂ ಗೆದ್ದಿದ್ದಾರೆ. ಒಂದೇ ಒಂದು ಪಂದ್ಯವನ್ನು ಸೋಲದೆ ಈ ದಿಗ್ವಿಜಯವನ್ನು ಸಾಧಿಸಿದ್ದೀರಿ ಎಂದು ಹೇಳಿದ್ದಾರೆ.

ಇದೇ ವೇಳೆ ಟೀಂ ಇಂಡಿಯಾಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಗೃಹ ಸಚಿವ ಅಮಿತ್ ಶಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಕೇಂದ್ರ  ಸಚಿವ ಹೆಚ್​​ಡಿ ಕುಮಾರಸ್ವಾಮಿ ಸೇರಿದಂತೆ ಎಲ್ಲ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ – ಮತ್ತೊಂದು ಬೃಹತ್​ ಹೋರಾಟಕ್ಕೆ ಕರವೇ ನಾರಾಯಣ​ ಗೌಡ ಕರೆ..!

Leave a Comment

DG Ad

RELATED LATEST NEWS

Top Headlines

ಬಸ್​ನಲ್ಲಿ ಸಿಕ್ತು ಚಿನ್ನಾಭರಣದ ಬ್ಯಾಗ್ – ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ವಿಜಯನಗರ ನಿವಾಸಿ ರಾಘವೇಂದ್ರ

ವಿಜಯನಗರ : ಬಸ್​ನಲ್ಲಿ ಸಿಕ್ಕ ಲಕ್ಷ-ಲಕ್ಷ ಮೌಲ್ಯದ ಚಿನ್ನಾಭರಣವನ್ನು ಪೊಲೀಸರಿಗೆ ಒಪ್ಪಿಸಿ ವಿಜಯನಗರ ಜಿಲ್ಲೆಯ ರಾಘವೇಂದ್ರ ಎಂಬುವವರು ಪ್ರಾಮಾಣಿಕತೆ ಮೆರೆದಿದ್ದಾರೆ. ಹೊಸಪೇಟೆ ತಾಲೂಕಿನ ಮಲಪನಗುಡಿಯ ರಾಘವೇಂದ್ರ ಅವರು

Live Cricket

Add Your Heading Text Here