ಚಿಕ್ಕಮಗಳೂರು : ಓವರ್ ಟೇಕ್ ಮಾಡಲು ಹೋಗಿ ಖಾಸಗಿ ಬಸ್ ಸೇತುವೆಗೆ ಗುದ್ದಿದ ಪರಿಣಾಮ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದೆ.
ಭದ್ರಾವತಿಯಿಂದ ತರೀಕೆರೆಗೆ ಬರುತ್ತಿದ್ದ ಖಾಸಗಿ ಬಸ್ ಕಿರಿದಾದ ಸೇತುವೆ ಬಳಿ ಮತ್ತೊಂದು ಬಸ್ ಓವರ್ ಟೇಕ್ ಮಾಡಲು ಹೋಗಿದೆ. ಈ ಆಚಾರುತಕ್ಕೆ ಚಾಲಕನ ಅಜಾಗ್ರತೆ, ಅತಿಯಾದ ವೇಗ ಕಾರಣವೆಂದು ಹೇಳಲಾಗುತ್ತಿದೆ. ಬಸ್ ಸೇತುವೆಗೆ ಗುದ್ದಿದ ಪರಿಣಾಮ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನೆಯಿಂದ ಗಾಯಾಗೊಂಡ ವಿದ್ಯಾರ್ಥಿಗಳಿಗೆ ತರೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಖಾಸಗಿ ಬಸ್ ಚಾಲಕನ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದು, ಘಟನೆಯ ಸಂಬಂಧ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಶಿರೂರು ಗುಡ್ಡ ಕುಸಿತ : 73 ದಿನಗಳ ಬಳಿಕ ಅರ್ಜುನ್ ಮೃತದೇಹ ಪತ್ತೆ..!
Post Views: 160