ಕನ್ನಡ ಚಿತ್ರರಂಗಕ್ಕೆ ಸೂರಜ್ ಪ್ರೊಡಕ್ಷನ್ಸ್ ಮೂಲಕ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರ ಹುಟ್ಟುಹಬ್ಬ ಇತ್ತೀಚೆಗೆ ನಡೆಯಿತು. ‘ಉಪ್ಪು ಹುಳಿ ಖಾರ’, ‘ನಾತಿಚರಾಮಿ’, ‘ಪಡ್ಡೆಹುಲಿ’, ‘100’ ಮುಂತಾದ ಕನ್ನಡ ಸಿನಿಮಾಗಳನ್ನು ರಮೇಶ್ ರೆಡ್ಡಿ ನಿರ್ಮಾಣ ಮಾಡಿದ್ದಾರೆ.
ಸದ್ಯ ಶಿವರಾಜ್ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ಅಭಿನಯದ ಹಾಗೂ ಅರ್ಜುನ್ ಜನ್ಯ ನಿರ್ದೇಶನದ ಬಹು ನಿರೀಕ್ಷಿತ “45” ಚಿತ್ರದ ನಿರ್ಮಾಪಕರಾಗಿರುವ ರಮೇಶ್ ರೆಡ್ಡಿ ಅವರ ಹುಟ್ಟುಹಬ್ಬವನ್ನು ಚಿತ್ರತಂಡದ ಸದಸ್ಯರು ಕೇಕ್ ಕಟ್ ಮಾಡಿಸುವ ಮೂಲಕ ಆಚರಿಸಿದ್ದರು. ಬಾಬಣ್ಣ, ರವಿಶಂಕರ್, ಮಂಜುನಾಥ್, ಸುರೇಶ್, ಸುಧೀಂದ್ರ ವೆಂಕಟೇಶ್ ಹಾಗೂ ನಿರ್ಮಾಪಕ ರಮೇಶ್ ರೆಡ್ಡಿ ಅವರ ಸ್ನೇಹಿತರು ಮೆಚ್ಚಿನ ನಿರ್ಮಾಪಕರಿಗೆ ಶುಭಾಶಯ ಕೋರಿದರು.
ಒಂದಷ್ಟು ಕಾರಣಗಳಿಂದ ‘45’ ಸಿನಿಮಾ ಕೌತುಕ ಸೃಷ್ಟಿ ಮಾಡಿದ್ದು, ‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್, ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯ ಅವರು ನಿರ್ದೇಶನ ಮಾಡುತ್ತಿರುವ ಮೊದಲ ಸಿನಿಮಾ ಇದಾಗಿದ್ದು, ಈ ಚಿತ್ರಕ್ಕೆ ‘ಸೂರಜ್ ಪ್ರೊಡಕ್ಷನ್ಸ್’ ಮೂಲಕ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ಬಂಡವಾಳ ಹೂಡಿದ್ದಾರೆ.
ಇದನ್ನೂ ಓದಿ : ಅತ್ಯಾಚಾರ ಪ್ರಕರಣ – ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್..!