Download Our App

Follow us

Home » ಮೆಟ್ರೋ » ಬಿಬಿಎಂಪಿ ಆಸ್ತಿ ತೆರಿಗೆ ದರ ಹೆಚ್ಚಳದ ಸುದ್ದಿ ಸುಳ್ಳು – ಡಿಕೆ ಶಿವಕುಮಾರ್ ಸ್ಪಷ್ಟನೆ..!

ಬಿಬಿಎಂಪಿ ಆಸ್ತಿ ತೆರಿಗೆ ದರ ಹೆಚ್ಚಳದ ಸುದ್ದಿ ಸುಳ್ಳು – ಡಿಕೆ ಶಿವಕುಮಾರ್ ಸ್ಪಷ್ಟನೆ..!

ಬೆಂಗಳೂರು : ಬಿಬಿಎಂಪಿ ಆಸ್ತಿ ತೆರಿಗೆ ದರ ಏಪ್ರಿಲ್ 1 ರಿಂದ ಹೆಚ್ಚುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. ಆದರೆ, ಇದು ಸುಳ್ಳು ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. ಇದರ ಬೆನ್ನಲ್ಲೇ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್ ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಮನವಿ ಮಾಡಿದ್ದಾರೆ.

“ಏಪ್ರಿಲ್ 1, 2024 ರಿಂದ ಬಿಬಿಎಂಪಿ ಆಸ್ತಿ ತೆರಿಗೆ ದರವನ್ನು ಹೆಚ್ಚಿಸುವ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ ಸುದ್ದಿ ಪೆಡ್ಲರ್​ಗಳು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ ಎಂದು ನನ್ನ ಗಮನಕ್ಕೆ ಬಂದಿದೆ. ಬಿಬಿಎಂಪಿ ಯಾವುದೇ ಆಸ್ತಿ ತೆರಿಗೆಯನ್ನು ಹೆಚ್ಚಿಸಿಲ್ಲ, 2016 ರಲ್ಲಿ ನಿಗದಿಪಡಿಸಿದ ದರದಲ್ಲಿಯೇ ವಿಧಿಸಲಾಗುವುದು. ದಯವಿಟ್ಟು ಈ ಬಗ್ಗೆ ಯಾವುದೇ ವದಂತಿಗಳನ್ನು ನಂಬಬೇಡಿ” ಎಂದು ಮನವಿ ಮಾಡಿದ್ದಾರೆ.

ಬಿಬಿಎಂಪಿ ಆಸ್ತಿ ತೆರಿಗೆ ರಿಯಾಯಿತಿ : ಬಿಬಿಎಂಪಿ ಆಸ್ತಿ ತೆರಿಗೆ ಪಾವತಿ ಮಾಡುವವರಿಗೆ ನೀಡುವ ಶೇ.5 ರಷ್ಟು ರಿಯಾಯಿತಿಯು ಈ ಹಿಂದೆ ಆರ್ಥಿಕ ವರ್ಷದ ಮೊದಲ ಎರಡು ತಿಂಗಳು ಅಂದರೆ, ಏಪ್ರಿಲ್ ಮತ್ತು ಮೇ ತಿಂಗಳವರೆಗೆ ಮಾತ್ರ ಅನ್ವಯವಾಗುತ್ತಿತ್ತು. ಇದೀಗ ಈ ಅವಧಿಯನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ : ಎಲೆಕ್ಷನ್ ಪ್ರಚಾರದ ಬ್ಯುಸಿಯಲ್ಲಿಯೂ ಬಿಡದಿ ತಟ್ಟೆ ಇಡ್ಲಿ ಸವಿದ ಡಿಕೆ ಸುರೇಶ್..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here