ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್, ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ಗವರ್ನರ್ ಆದೇಶವನ್ನು ಎತ್ತಿ ಹಿಡಿದಿದೆ.
ಸಿಎಂ ಸಿದ್ದರಾಮಯ್ಯ ಪರ ಹಾಗೂ ದೂರುದಾರರ ವಾದ, ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಇಂದಿಗೆ ತೀರ್ಪನ್ನು ಕಾಯ್ದಿರಿಸಿತ್ತು. ಮುಡಾ ಪ್ರಕರಣದಲ್ಲಿ ಅರ್ಜಿದಾರರ ಕ್ರಮ ಸೂಕ್ತವಾಗಿದೆ. ಹೀಗಾಗಿ ಗವರ್ನರ್ ಆದೇಶವನ್ನು ಹೈಕೋರ್ಟ್ ಒಪ್ಪಿಕೊಂಡಿದೆ. ಹೈಕೋರ್ಟ್ನ ಈ ಮಹತ್ವದ ತೀರ್ಪಿನಿಂದ ಸಿಎಂ ಸಿದ್ದರಾಮಯ್ಯಗೆ ಬುಹು ದೊಡ್ಡ ಸಂಕಷ್ಟ ಎದುರಾಗಿದೆ. ಸಿದ್ದರಾಮಯ್ಯ ಅವರ ಅರ್ಜಿ ವಜಾಗೊಂಡಿರುವುದರಿಂದ ಅಧೀನ ನ್ಯಾಯಾಲಯ ತೀರ್ಪು ಘೋಷಿಸಬಹುದು. ಈ ಪ್ರಕರಣದಲ್ಲಿ ಸೆಕ್ಷನ್ 17A ಅನುಮತಿ ಪಡೆಯುವುದು ಮುಖ್ಯವಾಗಿದೆ.
ಹೈಕೋರ್ಟ್ನ ಈ ತೀರ್ಪು ನಿರೀಕ್ಷೆ ಮಾಡಿದ್ದ ಸಿಎಂ ಸಿದ್ದರಾಮಯ್ಯನವರು ಮುಂದಿನ ಹೋರಾಟಕ್ಕೆ ಸಜ್ಜಾಗಿದ್ದಾರೆ. ಎಲ್ಲವನ್ನೂ ಎದುರಿಸೋದಕ್ಕೆ ತಯಾರಾಗಿರುವ ಸಿದ್ದರಾಮಯ್ಯ, ಪ್ರಾಸಿಕ್ಯೂಷನ್ ನೀಡಿದ್ದನ್ನು ಪ್ರಶ್ನಿಸಿ ಮುಂದಿನ ಹೋರಾಟ ನಡೆಸಲಿದ್ದಾರೆ. ಮುಂದಿನ ಕಾನೂನು ಹೋರಾಟಕ್ಕೂ ಈಗಾಗಲೇ ಸಿಎಂ ಚರ್ಚೆ ನಡೆಸಿದ್ದು, ಸುಪ್ರೀಂ ಕೋರ್ಟ್ ಬಾಗಿಲು ತಟ್ಟಲೂ ಸಿದ್ಧವಾಗಿದ್ದಾರೆ. ಜೊತೆಗೆ ರಾಜ್ಯಪಾಲರ ವಿರುದ್ಧವೂ ದೊಡ್ಡ ಮಟ್ಟದಲ್ಲಿ ಹೋರಾಟಕ್ಕೆ ಪ್ಲಾನ್ ಮಾಡಿದ್ದಾರೆ.
ಸಿಎಂ ಮುಂದಿನ ದಾರಿ ಏನು?
- ಕಾನೂನಾತ್ಮಕವಾಗಿ ಹೋರಾಟ ನಡೆಸಲು ಸಿದ್ಧತೆ
- ತೀರ್ಪು ಬಂದ ಬೆನ್ನಲ್ಲೇ ಹಿರಿಯ ವಕೀಲರ ಜೊತೆ ಚರ್ಚೆ
- ವಕೀಲ ಅಭಿಷೇಕ್ ಮನು ಸಿಂಘ್ವಿ ಜೊತೆ ಸಿಎಂ ಸಮಾಲೋಚನೆ
- ರಾಜಕೀಯವಾಗಿಯೂ ದೊಡ್ಡ ಹೋರಾಟಕ್ಕೆ ಸಿದ್ದು ಸಿದ್ಧತೆ
- ಸುಪ್ರೀಂಕೋರ್ಟ್ ಬಾಗಿಲು ತಟ್ಟಲೂ ಸಿಎಂ ಸಿದ್ಧತೆ
- ರಾಜ್ಯಪಾಲರ ವಿರುದ್ಧ ದೊಡ್ಡ ಮಟ್ಟದ ಹೋರಾಟಕ್ಕೆ ಸಜ್ಜು
- ಬಿಜೆಪಿ-ಜೆಡಿಎಸ್ ಷಡ್ಯಂತ್ರ ಎಂಬ ಸಂದೇಶ ರವಾನೆ
- ರಾಷ್ಟ್ರಮಟ್ಟದಲ್ಲೂ ಹೋರಾಟವನ್ನ ನಡೆಸಲು ಸಿದ್ಧತೆ
- ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ಮುಂದಿನ ನಿರ್ಧಾರ
ಇದನ್ನೂ ಓದಿ : ಗೇಟ್ ಬಿದ್ದು ಬಾಲಕ ಸಾವು ಪ್ರಕರಣ – BBMP ಸಹಾಯಕ ಇಂಜಿನಿಯರ್ ಸಸ್ಪೆಂಡ್..!