Download Our App

Follow us

Home » ಜಿಲ್ಲೆ » ಮಂಗಳೂರಲ್ಲಿ ಶಿಕ್ಷಕಿ ವಿರುದ್ಧದ ಪ್ರತಿಭಟನೆ ಕೇಸ್ : ಶಾಸಕರ ವಿರುದ್ಧದ FIR​ ರದ್ದು ಮಾಡುವಂತೆ ಆಗ್ರಹಿಸಿ ಹಿಂದೂ ಸಂಘಟನೆಗಳ ಬೃಹತ್ ಪ್ರತಿಭಟನೆ..!

ಮಂಗಳೂರಲ್ಲಿ ಶಿಕ್ಷಕಿ ವಿರುದ್ಧದ ಪ್ರತಿಭಟನೆ ಕೇಸ್ : ಶಾಸಕರ ವಿರುದ್ಧದ FIR​ ರದ್ದು ಮಾಡುವಂತೆ ಆಗ್ರಹಿಸಿ ಹಿಂದೂ ಸಂಘಟನೆಗಳ ಬೃಹತ್ ಪ್ರತಿಭಟನೆ..!

ಮಂಗಳೂರು : ಸಂತ ಜೆರೋಸಾ ಶಾಲೆಯ ಶಿಕ್ಷಕಿಯಿಂದ ಹಿಂದೂ ಧರ್ಮಕ್ಕೆ ಅವಹೇಳನಕಾರಿ ಆರೋಪ ಹಿನ್ನೆಲೆಯಲ್ಲಿ ಶಿಕ್ಷಕಿ ವಿರುದ್ಧ ಪ್ರತಿಭಟನೆ, ಸ್ಕೂಲ್​ ಆವರಣದಲ್ಲಿ ಪ್ರತಿಭಟನೆ ಮಾಡಿದ್ದಲ್ಲದೇ, ಕ್ರೈಸ್ತ್ರ ಧರ್ಮಕ್ಕೆ ಅವಹೇಳನ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಡಾ.ವೈ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್ ಹಾಗೂ ವಿಹೆಚ್​ಪಿ ಮುಖಂಡರಾದಂತ ಶರಣ್ ಪಂಪ್ವೆಲ್ ಸೇರಿದಂತೆ ಐವರ ಮೇಲೆ ಎಫ್​ಐಆರ್ ದಾಖಲು ಮಾಡಲಾಗಿತ್ತು.

ಇದನ್ನು ವಿರೋಧಿಸಿ ಇಂದು ವಿಶ್ವ ಹಿಂದೂ ಪರಿಷತ್, ಭಜರಂಗದಳದ ಕಾರ್ಯಕರ್ತರು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ಮಾಡುತ್ತಿರುವ ಕಾರ್ಯಕರ್ತರು ಬಿಜೆಪಿ ನಾಯಕರ ಮೇಲೆ ಇರುವಂತ ಎಫ್​ಐಆರ್​ ಅನ್ನು ಹಿಂಪಡೆಯುವಂತೆ ಒತ್ತಾಯಿಸಿ ಮಂಗಳೂರಿನ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಈ ಹಿಂದೆ ಎಫ್​​ಐಆರ್​ ಹಿಂಪಡೆಯುವಂತೆ ಮನವಿಯನ್ನು ನೀಡಲಾಗಿತ್ತು. ಆದರೆ ಇದನ್ನು ಪರಿಗಣಿಸದ ಹಿನ್ನೆಲೆಯಲ್ಲಿ ಇಂದು ಹೋರಾಟ ನಡೆಸಲಾಗುತ್ತಿದೆ. ಈ ವೇಳೆ ಕಾರ್ಯಕರ್ತರು ಜಿಲ್ಲಾಧಿಕಾರಿ ಮತ್ತು ಕಮಿಷನರ್​ ಕಚೇರಿಗೆ ನುಗ್ಗಿ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಈ ಸಂಬಂಧ ಕಾರ್ಯಕರ್ತರು ಮತ್ತು ಪೊಲೀಸರ ಮಧ್ಯೆ ನೂಕಾಟ, ತಳ್ಳಾಟ ನಡೆದಿದೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಕಚೇರಿಗೆ ನುಗ್ಗಲು ಯತ್ನಿಸಿದ 100ಕ್ಕೂ ಹೆಚ್ಚು ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದುಕೊಂಡು ವಾಹನದಲ್ಲಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ : ರಾಜ್ಯ ಸರ್ಕಾರದ ವಿರುದ್ದ ಸಾರಿಗೆ ನೌಕರರ ಸಮರ : ವಿವಿಧ ಬೇಡಿಕೆ ಆಗ್ರಹಿಸಿ ಮಾರ್ಚ್ 4ರಿಂದ ಸತ್ಯಾಗ್ರಹಕ್ಕೆ ಕರೆ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಿಗೆ ನಾಯಿ ಮಾಂಸ ರವಾನೆ ಆರೋಪ : ರೈಲ್ವೆ ನಿಲ್ದಾಣದಲ್ಲಿ ಹೈಡ್ರಾಮಾ – ಪೋಲಿಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪುನೀತ್ ಕೆರೆಹಳ್ಳಿ ಅರೆಸ್ಟ್..!

ಬೆಂಗಳೂರು : ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ನಿನ್ನೆ (ಜುಲೈ 26) ರಾಜಸ್ಥಾನದಿಂದ ಬಂದ

Live Cricket

Add Your Heading Text Here