Download Our App

Follow us

Home » ರಾಜಕೀಯ » ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರೊಟೆಸ್ಟ್ – ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನ..!

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರೊಟೆಸ್ಟ್ – ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನ..!

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಹಾಗೂ ವಾಲ್ಮೀಕಿ ನಿಗಮದಲ್ಲಿ ನಡೆದ ಬಹುಕೋಟಿ ‌ಹಗರಣವನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

 

ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿರುವ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದ ಹೊಣೆ ಹೊತ್ತು ಸಚಿವ ನಾಗೇಂದ್ರ ರಾಜೀನಾಮೆಗೆ ಹಾಗೂ ನಿಗಮದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ, ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಸಿಎಂ ಸಿದ್ದರಾಮಯ್ಯ ಮನೆಯಲ್ಲೇ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಅಶೋಕಾ ಹೋಟೆಲ್ ಬಳಿ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ತಡೆದಿದ್ದು, ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಈ ವೇಳೆ ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ನಿವಾಸ ಕಾವೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ಇದನ್ನೂ ಓದಿ : ಹೈಕೋರ್ಟ್​ ವಕೀಲೆ ಚೈತ್ರಾ ಗೌಡ ಆತ್ಮಹತ್ಯೆ ಕೇಸ್‌ ತನಿಖೆ ಸಿಸಿಬಿಗೆ ವರ್ಗಾವಣೆ..!

 

 

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here