ಮಂಡ್ಯ : ‘ಮುಸ್ಲಿಮರಿಗೆ ಮತದಾನದ ಹಕ್ಕನ್ನು ರದ್ದುಪಡಿಸಲು ಕಾನೂನು ಜಾರಿ ಮಾಡಬೇಕು’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಚಂದ್ರಶೇಖರನಾಥ ಸ್ವಾಮೀಜಿಗೆ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಉಪ್ಪಾರಪೇಟೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
ಸಾಮಾಜಿಕ ಕಾರ್ಯಕರ್ತ ಸೈಯ್ಯದ್ ಅಬ್ಬಾಸ್ ಅವರು ನೀಡಿದ ದೂರಿನ ಆಧಾರದ ಮೇಲೆ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಉಪ್ಪಾರಪೇಟೆ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇದೀಗ ಸ್ವಾಮೀಜಿ ವಿರುದ್ಧ ದಾಖಲಾಗಿರುವ FIR ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ನಾಡಪ್ರಭು ಕೆಂಪೇಗೌಡರ ಒಕ್ಕಲಿಗ ಸಂಘದಿಂದ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಪ್ರತಿಭಟನೆ ನಡೆದಿದ್ದು, ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ವಾಮೀಜಿ ಬಾಯಿ ತಪ್ಪಿ ಆಡಿರುವ ಮಾತುಗಳೇ ವಿವಾದ ಆಗಿವೆ, ಆನಂತರ ಸ್ವಾಮೀಜಿಗಳು ಬಹಿರಂಗ ಕ್ಷಮೆಯನ್ನೂ ಕೇಳಿದ್ದಾರೆ. ಹೀಗಿದ್ದರೂ ಒಕ್ಕಲಿಗ ಸ್ವಾಮೀಜಿ ವಿರುದ್ಧ FIR ಹಾಕಲಾಗಿದೆ, ಕೂಡಲೇ ಸ್ವಾಮೀಜಿ ವಿರುದ್ಧ ಹಾಕಿರುವ FIR ರದ್ದು ಮಾಡಬೇಕು. ಇಲ್ಲದೇ ಇದ್ರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸೋದಾಗಿ ಪ್ರತಿಭಟನಕಾರರು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ಜಗ್ಗಲ್ಲ.. ಬಗ್ಗಲ್ಲ ಎಂದವರೆಲ್ಲಾ ಬಿಜೆಪಿಯಲ್ಲಿ ಏನಾದ್ರು – ಯತ್ನಾಳ್ ಟೀಂ ವಿರುದ್ಧ ಬಿ.ಸಿ ಪಾಟೀಲ್ ಕಿಡಿ..!