Download Our App

Follow us

Home » ಸಿನಿಮಾ » ಹೊಂಬಾಳೆ ಫಿಲಂಸ್ ಮೂಲಕ ಕರ್ನಾಟಕದಲ್ಲಿ ಬಿಡುಗಡೆಯಾಗುತ್ತಿದೆ ಪೃಥ್ವಿರಾಜ್ ಸುಕುಮಾರನ್ ಅಭಿನಯದ ‘ಆಡುಜೀವಿತಂ’ ಚಿತ್ರ..!

ಹೊಂಬಾಳೆ ಫಿಲಂಸ್ ಮೂಲಕ ಕರ್ನಾಟಕದಲ್ಲಿ ಬಿಡುಗಡೆಯಾಗುತ್ತಿದೆ ಪೃಥ್ವಿರಾಜ್ ಸುಕುಮಾರನ್ ಅಭಿನಯದ ‘ಆಡುಜೀವಿತಂ’ ಚಿತ್ರ..!

ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್ ಮೂಲಕ ಬಿಡುಗಡೆಯಾಗುತ್ತಿದೆ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಬಹು ನಿರೀಕ್ಷಿತ “ಆಡುಜೀವಿತಂ”(ಗೋಟ್ ಲೈಫ್)ಚಿತ್ರ. ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ಅವರ ನಿರ್ದೇಶನದಲ್ಲಿ ಪೃಥ್ವಿರಾಜ್ ಸುಕುಮಾರನ್ ನಾಯಕರಾಗಿ ನಟಿಸಿರುವ ಬಹುನಿರೀಕ್ಷಿತ “ಆಡುಜೀವಿತಂ”(ಗೋಟ್ ಲೈಫ್) ಚಿತ್ರ ಇದೇ ಮಾರ್ಚ್ 28 ರಂದು ತೆರೆಗೆ ಬರಲಿದೆ. ಹೆಸರಾಂತ ಹೊಂಬಾಳೆ ಫಿಲಂಸ್ ಕರ್ನಾಟಕದ ವಿತರಣೆಯ ಹಕ್ಕನ್ನು ಪಡೆದುಕೊಂಡಿದೆ. ಕರ್ನಾಟಕದಾದ್ಯಂತ ಹೊಂಬಾಳೆ ಫಿಲಂಸ್ ಸಂಸ್ಥೆಯ ವಿಜಯ್ ಕಿರಗಂದೂರ್ ಅವರು ಈ ಚಿತ್ರವನ್ನು ಅರ್ಪಿಸಿ, ಬಿಡುಗಡೆ ಮಾಡುತ್ತಿದ್ದಾರೆ.

  

ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರ್ ಅವರು ಹಾಗೂ ನಟ ಪೃಥ್ವಿರಾಜ್ ಸುಕುಮಾರನ್ ಅವರು ಆತ್ಮೀಯ ಸ್ನೇಹಿತರು. ಹೊಂಬಾಳೆ ಫಿಲಂಸ್ ನ “ಕೆ.ಜಿ.ಎಫ್”, “ಕಾಂತಾರ ” ದಂತಹ ಜನಪ್ರಿಯ ಚಿತ್ರಗಳನ್ನು ಕೇರಳದಲ್ಲಿ ಪೃಥ್ವಿರಾಜ್ ಸುಕುಮಾರನ್ ಅವರು ಬಿಡುಗಡೆ ಮಾಡಿದ್ದರು. ಈಗ ಪೃಥ್ವಿರಾಜ್ ಅವರ ನಟನೆಯ, ವಿಭಿನ್ನ ಕಥಾಹಂದರ ಹೊಂದಿರುವ “ಆಡುಜೀವಿತಂ” ಚಿತ್ರವನ್ನು ಹೊಂಬಾಳೆ ಫಿಲಂಸ್ ಸಂಸ್ಥೆ ಕರ್ನಾಟಕದಾದ್ಯಂತ ಅದ್ದೂರಿಯಾಗಿ ಬಿಡುಗಡೆ ಮಾಡುತ್ತಿದೆ. ಈ ಚಿತ್ರದ ಕುರಿತು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು.

ನನಗೆ ವಿಜಯ್ ಕಿರಗಂದೂರ್ ಅವರು ಆತ್ಮೀಯ ಸ್ನೇಹಿತರು ಎಂದು ಮಾತು ಆರಂಭಿಸಿದ ನಟ ಪೃಥ್ವಿರಾಜ್, ನಮ್ಮ “ಆಡುಜೀವಿತಂ” ಚಿತ್ರವನ್ನು ಕರ್ನಾಟಕದಾದ್ಯಂತ ಹೊಂಬಾಳೆ ಫಿಲಂಸ್ ಸಂಸ್ಥೆ ಬಿಡುಗಡೆ ಮಾಡುತ್ತಿದೆ. “ಕೆಜಿಎಫ್”, “ಕಾಂತಾರ” ದಂತಹ ಯಶಸ್ವಿ ಚಿತ್ರಗಳನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಂಸ್ ಮೂಲಕ ನಮ್ಮ ಚಿತ್ರ ಬಿಡುಗಡೆಯಾಗುತ್ತಿರುವುದು ತುಂಬಾ ಸಂತೋಷವಾಗಿದೆ.

2008 ರಲ್ಲಿ ಬ್ಲೆಸ್ಸಿ ಅವರು “ಗೋಟ್ ಲೈಫ್” ಚಿತ್ರ ಮಾಡಬೇಕೆಂದುಕೊಂಡಿದ್ದರು, ಚಿತ್ರೀಕರಣ ಆರಂಭವಾಗಿದ್ದು 2018 ರಲ್ಲಿ. ಈ ಚಿತ್ರಕ್ಕಾಗಿ ಹದಿನಾರು ವರ್ಷಗಳ ಪರಿಶ್ರಮವಿದೆ. ನಾನು ಈ ಚಿತ್ರಕ್ಕಾಗಿ 31 ಕೆಜಿ ತೂಕ ಕಡಿಮೆ ಮಾಡಿಕೊಂಡಿದ್ದೇನೆ. ಇದು ಬೆನ್ಯಾಮಿನ್ ಅವರು ಬರೆದಿರುವ “ಆಡುಜೀವಿತಂ” ಕಾದಂಬರಿ ಆಧಾರಿತ ಚಿತ್ರ. ಈ ಜನಪ್ರಿಯ ಕಾದಂಬರಿ ಈವರೆಗೂ 251 ಬಾರಿ ಮುದ್ರಣವಾಗಿದೆ. ನಜೀಬ್ ಎಂಬುವವರ ಜೀವನದ ನೈಜ ಕಥೆ ಆಧರಿಸಿದೆ. ಅಮಲಾ ಪೌಲ್, ಹಾಲಿವುಡ್ ನಟ ಜಿಮ್ಮಿ ಜೀನ್ ಲೂಯಿಸ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಹೆಸರಾಂತ ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್ ಸಂಗೀತ ನೀಡಿದ್ದಾರೆ ಎಂದರು.

ಚಿತ್ರ ಮಾರ್ಚ್ 28 ರಂದು ಮಲಯಾಳಂ, ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಚಿತ್ರವನ್ನು ಎಲ್ಲರೂ ನೋಡಿ ಎಂದರು ನಿರ್ದೇಶಕ ಬ್ಲೆಸ್ಸಿ. ಹಾಲಿವುಡ್ ನಟ ಜಿಮ್ಮಿ ಜೀನ್ ಲೂಯಿಸ್ ಸಹ ಈ ಚಿತ್ರದಲ್ಲಿ ನಟಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಇದನ್ನೂ ಓದಿ : ಆರ್​​ಸಿ16 ಸಿನಿಮಾಗೆ ಡೈರೆಕ್ಟರ್ ಫಿಕ್ಸ್ : ಮತ್ತೊಮ್ಮೆ ರಾಮ್ ಚರಣ್ ಜೊತೆ ಕೈ ಜೋಡಿಸಿದ ಸುಕುಮಾರ್..!

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಉಡುಪಿ : ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆ ಸಾ*ವು..!

ಉಡುಪಿ : 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶವಿದೆ. ಹಾಗಾಗಿ ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. ಪಿ.ಯಶೋಧಾ ನಾರಾಯಣ ಉಪಾಧ್ಯ

Live Cricket

Add Your Heading Text Here