ಬೆಂಗಳೂರು : ಇಂದು ಪಿಎಸ್ಐ ನೇಮಕಾತಿ ಮರುಪರೀಕ್ಷೆ ಹಿನ್ನೆಲೆಯಿಂದಾಗಿ ಈ ಬಾರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಟ್ರಿಕ್ಟ್ ರೂಲ್ಸ್ ಜಾರಿ ಮಾಡಿದೆ. ನಗರದ 117 ಪರೀಕ್ಷಾ ಕೇಂದ್ರಗಳಲ್ಲಿ ಮರುಪರೀಕ್ಷೆ ನಡೆಯಲಿದೆ. ರಾಜ್ಯದ ಎಲ್ಲಾ ಅಭ್ಯರ್ಥಿಗಳು ಬೆಂಗಳೂರಿನಲ್ಲೇ ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ನೀಷೇದಾಜ್ಞೆ ಜಾರಿಗೊಳಿಸಿ ಕಮಿಷನರ್ ಬಿ. ದಯಾನಂದ್ ಆದೇಶ ಹೊರಡಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷಾ ಕೇಂದ್ರದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. 545 ಹುದ್ದೆಗಳಿಗೆ ಇಂದು ಪರೀಕ್ಷೆ ನಡೆಯಲಿದೆ.
ಪುರುಷ ಅಭ್ಯರ್ಥಿಗಳಿಗೆ ಮಾರ್ಗಸೂಚಿ :
- ಪೂರ್ಣ ತೋಳಿನ ಅಂಗಿಗಳನ್ನ ಧರಿಸದಂತೆ ಸೂಚನೆ
- ಕಾಲರ್ ರಹಿತ ಶರ್ಟ್, ಜೇಬುಗಳು ಕಮ್ಮಿ ಇರುವ ಪ್ಯಾಂಪಟ್ ಧರಿಸಬೇಕು
- ಕುರ್ತಾ, ಪೈಜಾಮು, ಜೀನ್ಸ್ ಪ್ಯಾಂಟ್ಗಳಿಗೆ ಅನುಮತಿ ಇಲ್ಲ
- ಶರ್ಟ್ ಅಥವಾ ಪ್ಯಾಂಟ್ಗಳಿಗೆ ಜಿಪ್ ಪ್ಯಾಕೆಟ್ಗಳು
- ದೊಡ್ಡ ದೊಡ್ಡ ಗುಂಡಿಗಳು, ಎಕ್ಸ್ಟ್ರಾ ಡಿಸೈನ್ ಇರಬಾರದು
- ಪರೀಕ್ಷಾ ಹಾಲ್ಗೆ ಶೂಗಳು ಕಟ್ಟು ನಿಟ್ಟಾಗಿ ನಿಷೇಧ
- ಸ್ಯಾಂಡಲ್ ಅಥವಾ ತೆಳುವಾದ ಚಪ್ಪಲಿ ಬಳಕೆಗೆ ಸೂಚನೆ
- ಚೈನ್, ಕಿವಿಯೋಲೆ, ಉಂಗುರ, ಕೈ ಕಡಗ ಧರಿಸಲು ನಿಷೇಧಮಹಿಳಾ ಅಭ್ಯರ್ಥಿಗಳಿಗೆ ಮಾರ್ಗಸೂಚಿ :
- ಡಿಸೈನ್, ಬಟನ್ ಇರೋ, ಹೂಗಳು ಇರೋ ಬಟ್ಟೆ ಧರಿಸುವಂತಿಲ್ಲ
- ಪೂರ್ಣ ತೋಳಿನ ಬಟ್ಟೆ ಬಳಸದಂತೆ ಸೂಚನೆ
- ಮುಜುಗರವಾಗದಂತೆ ಅರ್ಧ ತೋಳಿನ ಬಟ್ಟೆ ಬಳಸಬೇಕು
- ಇನ್ನೊಬ್ಬರಿಗೆ ಮುಜುಗರವಾದ ಟಾಪ್ಗಳು ಬಳಸಲು ಸೂಚನೆ
- ಹೈ ಹೀಲ್ಸ್ ಚಪ್ಪಲಿ-ಶೂಗಳನ್ನ ಧರಿಸದಂತೆ ಸೂಚನೆ
- ಮಹಿಳಾ ಅಭ್ಯರ್ಥಿಗಳಿಗೂ ಲೋಹ, ಚೈನ್ ಬಳಸದಂತೆ ಸೂಚನೆ
- ಮಂಗಳ ಸೂತ್ರ, ಕಾಲುಂಗುರ ಬಳಸಲು ಅನುಮತಿಈ ವಸ್ತುಗಳು ಬಳಸದಂತೆ ಸೂಚನೆ :
- ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಬ್ಲೂಟೂತ್,
- ಇಯರ್ ಫೋನ್, ಮೈಕ್ರೋ ಫೋನ್,ವಾಚ್ ಹಾಲ್ಗೆ ನೋ ಎಂಟ್ರಿ
- ಯಾವುದೇ ರೀತಿಯಾದ ಅಹಾರ, ನೀರಿನ ಬಾಟಲಿಗೆ ಅವಕಾಶ ಇಲ್ಲ
- ಪರೀಕ್ಷಾ ಕೇಂದ್ರದಲ್ಲಿಯೇ ನೀರು ಕುಡಿಯಲು ವ್ಯವಸ್ಥೆ ಇರುತ್ತೆ
- ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್,
- ಲಾಗ್ ಟೇಬಲ್ಗಳು ಪರೀಕ್ಷಾ ಕೇಂದ್ರಕ್ಕೆ ನಿಷೇಧ
- ಎಲ್ಲಾ ಅಭ್ಯರ್ಥಿಗಳಿಗೆ ಹ್ಯಾಟ್ ಧರಿಸದಂತೆ ಸೂಚನೆ
- ಎಲ್ಲರಿಗೂ ಮಾಸ್ಕ್ ಧರಿಸದಂತೆ ಸೂಚನೆಈ ಪತ್ರ ತರಲು ಅನುಮತಿ :
- ಪ್ರವೇಶ ಪತ್ರ ಕಡ್ಡಾಯವಾಗಿ ತರಲು ಸೂಚನೆ
- ಸರ್ಕಾರದಿಂದ ಮಾನ್ಯವಾದ ಗುರುತಿನ ಚೀಟಿ ಕಡ್ಡಾಯ
- ಕೊನೆಯ ಬೆಲ್ ಹೊಡೆಯೋವರೆಗೂ ಪರೀಕ್ಷಾ ಹಾಲ್ನಲ್ಲಿರಬೇಕು
- ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆದೇಶ
ಇದನ್ನೂ ಓದಿ : ರಾಜ್ಯದ ಮತದಾರರ ಅಂತಿಮ ಪಟ್ಟಿ ಪ್ರಕಟ : ಒಟ್ಟು 5.38 ಕೋಟಿ ಮತದಾರರು..!
Post Views: 386